24
ಕುಂದಾಪುರ : ಇಲ್ಲಿನ ಡಾ ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ರ‍್ಯಾಂಕ್ ವಿಜೇತ ಪ್ರಾಕ್ತನ ವಿದ್ಯಾರ್ಥಿಗಳಾದ ಸುಹಾನಿ ಹಾಗೂ ಶ್ರದ್ದಾಯವರು ಕಾಲೇಜಿಗೆ ಆಗಮಿಸಿ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಬಿ. ಬಿ. ಎ ಪದವಿಯ ಪ್ರಯೋಜನಗಳು ಹಾಗೂ ಭವಿಷ್ಯದಲ್ಲಿ ಬದುಕನ್ನು ಕಟ್ಟಿಕೊಳ್ಳಲು ಪೂರಕವಾಗುವ ಅಂಶಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.
ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾರೈ ಹಾಗೂ ವಿಭಾಗದ ಪ್ರಾಧ್ಯಾಪಕರುಗಳು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

