ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಬೀಜಾಡಿಯ ಕಪಿಲೆ ಗೋ ಸಮೃದ್ಧಿ ಟ್ರಸ್ಟ್ ಗೆ ಮಂಗಳವಾರ ವಿದ್ಯಾರ್ಥಿಗಳು ಭೇಟಿ ನೀಡಿದರು.
ಟ್ರಸ್ಟ್ ನ ಪ್ರವರ್ತಕ ಕುಮಾರ್ ಕೆ. ಕಾಂಚನ್ ಅವರು ‘ದೇಸಿ ಗೋ ತಳಿಗಳು ಮತ್ತು ಅವುಗಳ ಉತ್ಪನ್ನಗಳ ಮಹತ್ವ’ದ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಸೆಗಣಿಯಿಂದ ಹಣತೆ, ದೂಪದ ಬತ್ತಿ ತಯಾರಿಕೆ ಹಾಗೂ ದೇಸಿ ಗೋವುಗಳ ಆರೈಕೆಯ ಕುರಿತು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.
ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಉಪನ್ಯಾಸಕರುಗಳಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ, ಶ್ರೀ ಸುಕುಮಾರ್ ಶೆಟ್ಟಿ ಕಮಲಶಿಲೆ, ದೀಪಾ ಪೂಜಾರಿ, ಶ್ರೀಮತಿ ಅರ್ಪಣಾ ಶೆಟ್ಟಿ, ಕಛೇರಿ ಸಿಬ್ಬಂದಿ ಶ್ರೀ ರಾಮಕೃಷ್ಣ ಖಾರ್ವಿ ಉಪಸ್ಥಿತರಿದ್ದರು. ಉಪನ್ಯಾಸಕಿ ಶ್ರೀಮತಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.