ಕುಂದಾಪುರ : ಕ್ಷೇತ್ರಕಾರ್ಯ ಮತ್ತು ಸಂದರ್ಶನದ ಸಂದರ್ಭದಲ್ಲಿ ಸಾಮಾಜಿಕ ಸಂಬAಧವನ್ನು ಉತ್ತಮವಾಗಿ ಬೆಳೆಸಿಕೊಳ್ಳಬೇಕು. ಜೊತೆಗೆ ಪೂರ್ವ ತಯಾರಿ, ಸ್ಥಳ ಮತ್ತು ವ್ಯಕ್ತಿಯ ಆಯ್ಕೆ, ವಿಶ್ಲೇಷಣೆ, ಮಾಹಿತಿ ಸಂಗ್ರಹಣೆ ಮತ್ತು ವಿವರಣೆಗಳು ಈ ಅಧ್ಯಯನದಲ್ಲಿ ಅತಿಮುಖ್ಯ ಎಂದು ರೇಡಿಯೋ ಕುಂದಾಪುರ 89.6 FM, ಭಂಡಾರ್‌ಕಾರ್ಸ್ ಕಾಲೇಜಿನ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಜ್ಯೋತಿ ಸಾಲಿಗ್ರಾಮ ಹೇಳಿದರು.
ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗವು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಡಾ. ಶಿವರಾಮ ಕಾರಂತ ಪ್ರತಿಷ್ಠಾನ – ಕಾರಂತ ಥೀಮ್ ಪಾರ್ಕ್, ಕೋಟ ಇವರ ಸಹಯೋಗದೊಂದಿಗೆ ಆಯೋಜಿಸಿದ ‘ಬರವಣಿಗೆ ಕೌಶಲ’ ಎನ್ನುವ ವಿಷಯದ ಕುರಿತಾದ ಒಂದು ದಿನದ ಕಾರ್ಯಾಗಾರದಲ್ಲಿ ಮೊದಲ ಗೋಷ್ಠಿಯಲ್ಲಿ ‘ಕ್ಷೇತ್ರಕಾರ್ಯ ಮತ್ತು ಸಂದರ್ಶನ’ ವಿಷಯದ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಉಪನ್ಯಾಸ ನೀಡಿ ಮಾತನಾಡಿದರು.
ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ರೇಷ್ಮಾ ಶೆಟ್ಟಿ ಸಮನ್ವಯಕಾರರಾಗಿದ್ದು, ವಿಭಾಗದ ಮುಖ್ಯಸ್ಥರು ಹಾಗೂ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ಪ್ರವೀಣಾ ಎಮ್. ಪೂಜಾರಿ, ರಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪೃಥ್ವಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಸಮರ್ಥ ಶೆಟ್ಟಿ ವಂದಿಸಿ, ಮಿಥಿಲೇಶ್ ಕಾರ್ಯಕ್ರಮ ನಿರೂಪಿಸಿದರು.

