ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸುವ ಸಲುವಾಗಿ ‘ವಿಧಿಕ್ತ-2025’ ಅಂತರ್-ತರಗತಿ ಸ್ಪರ್ಧೆಯ ಉದ್ಘಾಟನೆ ಅಕ್ಟೋಬರ್ 11ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಮೂಟ್‌ಕೋರ್ಟ್ ಮಾದರಿ ಆಧಾರಿತ ಈ ಕಾರ್ಯಕ್ರಮವನ್ನು ಕುಂದಾಪುರ ಎಜುಕೇಶನ್ ಸೊಸೈಟಿ (ರಿ.), ಕುಂದಾಪುರ ಇದರ ಕಾರ್ಯದರ್ಶಿಗಳಾದ ಶ್ರೀ ಸೀತಾರಾಮ ನಕ್ಕತಾಯ ನ್ಯಾಯದೇವತೆಯ ಕಣ್ಣಿಗೆ ಕಟ್ಟಿದ ಕಪ್ಪು ಪಟ್ಟಿಯನ್ನು ಬಿಡಿಸುವ ಮೂಲಕ ಚಾಲನೆ ನೀಡಿ, ಎಲ್ಲಾ ವಿದ್ಯಾರ್ಥಿಗಳಿಗೂ ಕಾನೂನು ಮಾಹಿತಿ ಅಗತ್ಯ ಮತ್ತು ಕಾನೂನು ಶಿಕ್ಷಣದ ಅರಿವು ಮಹತ್ವವಾದದ್ದು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಆಶಯ ನುಡಿಗಳನ್ನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ವಿ. ಭಟ್ ಪ್ರಾಸ್ತಾವಿಸಿದರು. ಕಾರ್ಯಕ್ರಮದ ಸಂಯೋಜಕರಾದ ಶ್ರೀ ಸತೀಶ್ ಶೆಟ್ಟಿ ಹೆಸ್ಕುತ್ತೂರು ಸ್ವಾಗತಿಸಿ, ಶ್ರೀಮತಿ ಜೋಸ್ಲಿನ್ ರೆನಿಟಾ ಡಿ. ಅಲ್ಮೇಡಾ ವಂದಿಸಿ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಶ್ರೀಮತಿ ಪೃಥ್ವಿಶ್ರೀ ಜಿ. ಶೆಟ್ಟಿ ನಿರೂಪಿಸಿದರು. ವಿದ್ಯಾರ್ಥಿನಿ ಮನೀಷಾ ಪ್ರಾರ್ಥಿಸಿದರು.

