ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮತ್ತು BAERU ಕಲೇಕ್ಟಿವ್ಸ್, ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಪ್ಲಾಸ್ಟಿಕ್ ಬಳಕೆಯ ಅರಿವಿನ ಕುರಿತಾದ ‘ಪ್ಲಾಸ್ಟಿಕಾಸುರ’ ಯಕ್ಷಗಾನ ಪ್ರಸ್ತುತಿ ನಡೆಯಿತು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಶ್ರೀಮತಿ ಪ್ರವೀಣಾ ಎಮ್. ಪೂಜಾರಿ ವಂದಿಸಿದರು.
Categories
‘ಪ್ಲಾಸ್ಟಿಕಾಸುರ’ಯಕ್ಷಗಾನ ಪ್ರಸ್ತುತಿ