Home » ವಿದ್ಯಾರ್ಥಿನಿಯರಿಗೆ ಅರಿವು ಕಾರ್ಯಕ್ರಮ
 

ವಿದ್ಯಾರ್ಥಿನಿಯರಿಗೆ ಅರಿವು ಕಾರ್ಯಕ್ರಮ

by Kundapur Xpress
Spread the love

ಕುಂದಾಪುರ : ಶಿಸ್ತು, ಸಂಯಮ, ಸ್ವಚ್ಛತೆಯು ವಿದ್ಯಾರ್ಥಿನಿಯರ ಬದುಕಿನಲ್ಲಿ ಅತಿಮುಖ್ಯವಾಗಿದ್ದು, ಸಾಮಾಜಿಕವಾಗಿ ವರ್ತಿಸುವಾಗ ಜಾಗೃತರಾಗಿರಿ, ಮೊಬೈಲ್ ಬಳಕೆಯ ಸಂದರ್ಭದಲ್ಲಿ ಎಚ್ಚರಿಕೆ ಇರಲಿ, ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಹೇಳಿದರು.
ಅವರು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ ಅರಿವು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಕಾಲೇಜಿನ ಆಡಳಿತ ನಿಕಾಯಕರು, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ ನಿರೂಪಿಸಿ, ವಂದಿಸಿದರು.

 

Related Articles

error: Content is protected !!