ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ ಘಟಕದ ಆಶ್ರಯದಲ್ಲಿ ಉನ್ನತ ಶಿಕ್ಷಣದ ಅವಕಾಶಗಳ ಕುರಿತು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀನಿವಾಸ್ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಮುಕ್ಕಾ ಕಾಲೇಜಿನ ನಿರ್ವಹಣಾ ವಿಭಾಗದ ಪ್ರಾಧ್ಯಾಪಕರಾದ ಸ್ವಪ್ನ ರಘುಪತಿ, ಡಾ. ರಿಚರ್ಡ್ ರಾಯನ್ ಸೆಕ್ವೇರಿಯಾ, ಸ್ವೀನ್ ಕುರಿಯಾಕೋಸ್, ಅಶ್ವಿನಿ ಆಚಾರ್, ವಂದನಾ ಶೆಣೈ ಮತ್ತು ರಚನಾ ಎಸ್. ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭ ಉನ್ನತ ಶಿಕ್ಷಣದ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ಅವರ ಜೊತೆ ಸಂವಾದ ನಡೆಸಿದರು.
ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ಘಟಕದ ಸಂಯೋಜಕ ತಿಮ್ಮಪ್ಪ ಡಿ.ಎಸ್. ಸ್ವಾಗತಿಸಿ, ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ವಂದಿಸಿದರು.

