89
ಕುಂದಾಪುರ : ಸಮಯದ ಜೊತೆ ಸಾಗುವಾಗ ಸಂಯಮ, ಹೃದಯ ಶ್ರೀಮಂತಿಕೆಯ ಮೌಲ್ಯಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಈ ಮೌಲ್ಯಗಳು ವಚನ ಸಾಹಿತ್ಯದಲ್ಲಿ ಹೇರಳವಾಗಿ ದೊರೆಯುತ್ತವೆ. ಸಾಹಿತ್ಯಗಳಲ್ಲಿನ ಸತ್ವವನ್ನು ಮೈಗೂಡಿಸಿಕೊಂಡಾಗ ಸುಂದರ ಬದುಕು ಸಾಧ್ಯ ಎಂದು ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀ ಸದಾಶಿವ ಹೊಳ್ಳ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆ ಮೂರರ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಹಾಗೂ ಶ್ರೀಮತಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ನಿಶ್ಮಿತಾ ಸ್ವಾಗತಿಸಿ, ಸಿಂಚನಾ ಅತಿಥಿಗಳನ್ನು ಪರಿಚಯಿಸಿ, ಸಿರಿ ವಂದಿಸಿ, ಸ್ನೇಹಾ ಪ್ರಾರ್ಥಿಸಿ, ಪ್ರತೀಕ್ಷಾ ನಿರೂಪಿಸಿದರು.

