Home » ಬಿ.ಬಿ. ಹೆಗ್ಡೆ ಕಾಲೇಜು: ಬಿಸಿಎ ವಿಭಾಗದಿಂದ ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಕೇಂದ್ರಕ್ಕೆ ಅಧ್ಯಯನ ಭೇಟಿ
 

ಬಿ.ಬಿ. ಹೆಗ್ಡೆ ಕಾಲೇಜು: ಬಿಸಿಎ ವಿಭಾಗದಿಂದ ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಕೇಂದ್ರಕ್ಕೆ ಅಧ್ಯಯನ ಭೇಟಿ

by Kundapur Xpress
Spread the love

ಕುಂದಾಪುರ : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ಮೇ 7 ರಂದು ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಕೇಂದ್ರಕ್ಕೆ ಅಧ್ಯಯನ ಭೇಟಿ ಆಯೋಜಿಸಲಾಯಿತು. ಈ ಅಧ್ಯಯನ ಭೇಟಿಯಲ್ಲಿ 100 ಬಿಸಿಎ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರುಗಳಾದ ಶ್ರೀಮತಿ ಜಯಲಕ್ಷ್ಮಿ ಕೆ., ಶ್ರೀಮತಿ ವಿಜಯಶ್ರೀ, ಶ್ರೀ ಮಹೇಶ್ ಪೂಜಾರಿ ಪಾಲ್ಗೊಂಡರು.
ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ರಾಜಲಕ್ಷ್ಮೀ ಆನಂದನ್ ಅವರು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಸ್ವಾಗತಿಸಿದರು. ನಂತರ ವಿದ್ಯಾರ್ಥಿಗಳಿಗೆ ಕೇಂದ್ರದ ವಿವಿಧ ತಾಂತ್ರಿಕ ವಿಭಾಗಗಳ ಪರಿಚಯವನ್ನು ಮಾಡಿಕೊಡಲಾಯಿತು.
ಈ ಅಧ್ಯಯನ ಭೇಟಿಯ ಮೂಲಕ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನಗಳ ಕುರಿತು ಪ್ರಾಯೋಗಿಕ ಜ್ಞಾನ ನೀಡಲಾಯಿತು. ಕೇಂದ್ರದಲ್ಲಿ ಕೃತಕ ಬುದ್ಧಿಮತ್ತೆ (Artificial Intelligence) ಯನ್ನು ದೈನಂದಿನ ಜೀವನದಲ್ಲಿ ಹೇಗೆ ಬಳಸಲಾಗುತ್ತದೆ ಎಂಬುದರ ಕುರಿತು, ಜೊತೆಗೆ ಸೈಬರ್ ಸೆಕ್ಯೂರಿಟಿ, ಇಂಟರ್ನೆಟ್ ಆಫ್ ಥಿಂಗ್ಸ್ (IoT), ಎಲೆಕ್ಟ್ರೀಕ್ ವಾಹನಗಳ ಕಾರ್ಯವಿಧಾನ, ರೋಬೋಟಿಕ್ಸ್, 2D ಮತ್ತು 3D ಪ್ರಿಂಟಿಂಗ್ ತಂತ್ರಜ್ಞಾನಗಳ ಬಗ್ಗೆ ಪ್ರಾತ್ಯಕ್ಷಿಕೆಗಳೊಂದಿಗೆ ಮಾಹಿತಿ ನೀಡಲಾಯಿತು.
ವಿದ್ಯಾರ್ಥಿಗಳು ಕೇಂದ್ರದ ಸೈಬರ್ ಸೆಕ್ಯೂರಿಟಿ ಲ್ಯಾಬ್ ಹಾಗೂ ಆಟೋಮೇಷನ್ ಲ್ಯಾಬ್‌ಗಳನ್ನು ವೀಕ್ಷಿಸಿ, ಅಲ್ಲಿ ಬಳಸಲಾಗುವ ಆಧುನಿಕ ತಂತ್ರಜ್ಞಾನಗಳು ಮತ್ತು ಸ್ವಯಂಚಾಲಿತ ವ್ಯವಸ್ಥೆಗಳ ಬಗ್ಗೆ ತಿಳಿದುಕೊಂಡರು. ಅಲ್ಲದೆ ಡ್ರೋನ್ ಚಾಲನಾ ತರಬೇತಿ ಕೇಂದ್ರವನ್ನು ವೀಕ್ಷಿಸಿ, ಡ್ರೋನ್ ತಂತ್ರಜ್ಞಾನದ ಬಳಕೆ ಮತ್ತು ಅದರ ಕಾರ್ಯವಿಧಾನಗಳ ಬಗ್ಗೆ ಮಾಹಿತಿಯನ್ನು ಪಡೆದರು.

 

Related Articles

error: Content is protected !!