27
ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕಾಮರ್ಸ್ ಮ್ಯಾನೇಜ್ಮೆಂಟ್ ಮತ್ತು ಐಟಿ ಅಸೋಸಿಯೇಷನ್ ವತಿಯಿಂದ ಮೇ ೨೫ರಂದು “ಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್” ಕಾರ್ಯಕ್ರಮ ಕಾಲೇಜಿನ ಎ.ವಿ. ಹಾಲ್‌ನಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ರಜತ್ ಬಂಗೇರ ಅವರು ವಿದ್ಯಾರ್ಥಿಗಳಿಗೆ ಉದ್ಯೋಗ ಕ್ಷೇತ್ರದ ಕೌಶಲ್ಯಗಳು, ಸಂದರ್ಶನ ಸಿದ್ಧತೆ ಹಾಗೂ ಕಾರ್ಪೊರೇಟ್ ಕ್ಷೇತ್ರಕ್ಕೆ ತಯಾರಾಗುವ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ಪ್ರೀತಿ ಹೆಗ್ಡೆ ಸ್ವಾಗತಿಸಿದರು. ಮೇಘಾ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಕಾಮರ್ಸ್ ಮ್ಯಾನೇಜ್ಮೆಂಟ್ ಹಾಗೂ ಐಟಿ ಅಸೋಸಿಯೇಷನ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

