Home » ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಾರ್ಷಿಕ ಗೇಮ್ಸ್ ಫೆಸ್ಟ್: ಕ್ರೀಡಾ ಸಾಧಕರಿಗೆ ಸನ್ಮಾನ
 

ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಾರ್ಷಿಕ ಗೇಮ್ಸ್ ಫೆಸ್ಟ್: ಕ್ರೀಡಾ ಸಾಧಕರಿಗೆ ಸನ್ಮಾನ

by Kundapur Xpress
Spread the love

ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದ ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಅಂತರ್-ತರಗತಿ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಸಮಾರಂಭ “ವಾರ್ಷಿಕ ಗೇಮ್ಸ್ ಫೆಸ್ಟ್” ಮೇ 27ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿ ಕುಂದಾಪುರದ ವೆಂಕಟರಮಣ ಪದವಿ-ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಶ್ರೀ ರಾಘವೇಂದ್ರ ಗಾಣಿಗ ಅವರು ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿ. ದೈಹಿಕ ಕ್ಷಮತೆಯೊಂದಿಗೆ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಮಾನಸಿಕ ಕ್ಷಮತೆಯನ್ನು ಕಂಡುಕೊಳ್ಳಬಹುದು ಎಂದರು. ಇದೇ ಸಂದರ್ಭ ಅವರು ಪರಿಶ್ರಮದ ಮೂಲಕ ಸಾಧನೆ ಮಾಡಿದ ಕ್ರೀಡಾ ವಿದ್ಯಾರ್ಥಿಗಳು ಸಾಧನೆಗೆ ಕಾರಣಿಕರ್ತರಾದ ಸಂಸ್ಥೆ ಮಾರ್ಗದರ್ಶಕರನ್ನು ಎಂದೂ ಮರೆಯಬಾರದು ಎಂದರು.
ವಿಶ್ವವಿದ್ಯಾನಿಲಯ ಮಟ್ಟದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ನಿಶಾಂತ್ ಡಿಸೋಜ, ಮಂಜುನಾಥ್, ವಿನ್ಸ÷್ಟನ್, ಲಕ್ಷ್ಮಿ, ಸಿಂಚನಾ ಜಿ. ನಾಯಕ್, ಸುಜನ್ ಭಂಡಾರಿ, ಆರ್ಯ ವಿ. ಪುತ್ರನ್, ಜೀವನ್ ಪೂಜಾರಿ, ಶ್ರೀನಿಧಿ ಶೆಟ್ಟಿ, ಪ್ರಶಾಂತ್ ಗೌಡ, ಪ್ರಜ್ವಲ್ ಡಿ. ಪಿ. ಅವರನ್ನು ಸನ್ಮಾನಿಸಲಾಯಿತು.
ಸಂಸ್ಥೆಯ ಪ್ರಾಂಶುಪಾಲ ಪ್ರೊ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಸಂಸ್ಥೆಯ ಕ್ರೀಡಾ ಯಶೋಗಾಥೆಯನ್ನು ಶ್ಲಾಘಿಸಿದರು. ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರಂಜಿತ್ ಟಿ.ಎನ್. ವಂದಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸುಹಾಸ್ ಮಲ್ಯ ಪ್ರಾರ್ಥಿಸಿದರು

 

Related Articles

error: Content is protected !!