Home » ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
 

ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ

by Kundapur Xpress
Spread the love

ಕುಂದಾಪುರ : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಜೂನ್ 2ರಂದು “ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ” ಕುರಿತ ಕಾರ್ಯಾಗಾರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿ MSDC ಮಣಿಪಾಲದ ಐ.ಟಿ. ಕೌಶಲ್ಯ ತರಬೇತುದಾರರಾದ ಶ್ರೀಮತಿ ಸಾವಿತ್ರಿ ಪ್ರಭುರವರು ಜೀವನ ಕೌಶಲ್ಯಗಳ ಮಹತ್ವ ಕುರಿತು ತಿಳಿಸಿ, ತಾಂತ್ರಿಕ ಕೌಶಲ್ಯಗಳೊಂದಿಗೆ ಜೀವನ ಕೌಶಲ್ಯಗಳನ್ನು ವರ್ಧಿಸಿಕೊಳ್ಳುವುದು ವರ್ತಮಾನದ ತುರ್ತು ಎಂದರು. ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಮತ್ತು ವೈಯಕ್ತಿಕ ಬೆಳವಣಿಗೆಗಾಗಿ ಇಂತಹ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಂಸ್ಥೆ ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿಭಾಗದ ಮುಖ್ಯಸ್ಥ ಶ್ರೀ ಮಹೇಶ್ ಕುಮಾರ್ ಹಾಗೂ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ತ್ರಿಷಾ ವಂದಿಸಿ, ಯಕ್ಷಿತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

 

Related Articles

error: Content is protected !!