117
ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ‘ದಾಂಡಿಯ 2025’ ನೃತ್ಯ ಕಾರ್ಯಕ್ರಮ ಜರುಗಿತು. ಕಾಲೇಜಿನ ಸಾಂಸ್ಕೃತಿಕ ತಂಡದಿಂದ ವಿನೂತನ ಶೈಲಿಯಲ್ಲಿ ದಾಂಡಿಯ ನೃತ್ಯ ಪ್ರಕಾರವನ್ನು ಕಾಲೇಜಿನ ಪ್ರಾಂಗಣದಲ್ಲಿ ನೆರವೇರಿಸಲಾಯಿತು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಲಲಿತ ಕಲಾ ಸಂಘದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ., ಶ್ರೀಮತಿ ನಿರ್ಮಲ ಬಿಲ್ಲವ, ಶ್ರೀಮತಿ ರೇವತಿ ಡಿ., ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿನಿ ಶ್ರೀರಕ್ಷಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

