ಕುಂದಾಪುರ :ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಹಾಗೂ ಎನ್.ಎಸ್.ಎಸ್. ಘಟಕಗಳ ಜಂಟಿ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಶ್ರೀ ಹುಂತ್ರಿಕೆ ಸುಧಾಕರ್ ಶೆಟ್ಟಿ ನೆರವೇರಿಸಿ, ಭಾರತೀಯರಿಗೆ ವಿಶ್ವದಲ್ಲಿ ಮನ್ನಣೆ ಸಿಗುತ್ತಿರುವುದಕ್ಕೆ ನಮ್ಮಲ್ಲಿರುವ ರಾಷ್ಟ್ರಭಕ್ತಿ ಮತ್ತು ತ್ಯಾಗ ಮನೋಭಾವನೆಯೆ ಕಾರಣ ಎಂದು ನುಡಿದರು.
ಈ ಸಂದರ್ಭದಲ್ಲಿ ಭಾರತೀಯ ಸೇನೆಯ ನಿವೃತ್ತ ಯೋಧ ಶ್ರೀ ರಾಜೀವ ಹೆಗ್ಡೆ ಕೂರಾಡಿ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಎನ್.ಸಿ.ಸಿ. ಲೆಫ್ಟಿನೆಂಟ್ ಹರೀಶ್ ಬಿ. ಎಎನ್ಒ, ಕೇರ್ ಟೇಕರ್ ತಿಮ್ಮಪ್ಪ ಡಿ.ಎಸ್., ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪೂಜಾ ಕುಂದರ್, ಬೋಧಕ – ಬೋಧಕೇತರ ಸಿಬ್ಬಂದಿಗಳು ಹಾಗೂ ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಯೋಗೀಶ್ ಶಾನುಭೋಗ್ ಸ್ವಾಗತಿಸಿ, ನಿರೂಪಿಸಿದರು. ಎನ್.ಸಿ.ಸಿ. ಕೆಡಿಟ್ ಮಹೇಶ್ ಕಮಾಂಡ್ ನೀಡಿ, ಪ್ರಮಿತಾ ಮತ್ತು ಶ್ರಾವ್ಯ ಪರೇಡ್ ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು.

