ಡಾ. ಬಿ. ಬಿ. ಹೆಗ್ಡೆ ಕಾಲೇಜು : ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ "ಹೊಂಬೆಳಕು" ಕಾರ್ಯಕ್ರಮ

by Kundapur Xpress
Spread the love

ಕುಂದಾಪುರ : ಇಲ್ಲಿನ ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಅಧ್ಯಯನ ಭೇಟಿಯ ಭಾಗವಾಗಿ ವಿದ್ಯಾರ್ಥಿಗಳು ಸ್ವರಾಜ್ಯ – 75 ತಂಡ ಮೂಡು ಗಿಳಿಯಾರಿನ ಜನ ಸೇವಾ ಟ್ರಸ್ಟ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕ, ಕೋಟದ ಹಸ್ತ ಚಿತ್ತ ಫೌಂಡೇಶನ್, ಉಸಿರು ಕೋಟ, ಜೈ ಕುಂದಾಪುರ ಸೇವಾ ಟ್ರಸ್ಟ್ ಹಾಗೂ ಅದಿಮ ಕಲಾ ಟ್ರಸ್ಟ್ ಉಡುಪಿ ಇವರ ಸಹಯೋಗದೊಂದಿಗೆ ಆಯೋಜಿಸಿದ ಕೋಟೇಶ್ವರದ ಸರ್ಜನ್ ಆಸ್ಪತ್ರೆಯ ಆವರಣದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಹುಲಿಕಲ್ಲು ನಾಗಭೂಷಣ್ ರಾವ್ ಅವರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ರಾಷ್ಟ್ರಧ್ವಜಕ್ಕೆ ಗೌರವಾರ್ಪಣೆ ಸಲ್ಲಿಸಿದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ದಿನಕರ್ ಆರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಭೂಸೇನಾ ಯೋಧ ಕರುಣಾಕರ ಗಾಣಿಗ ನಾಮಫಲಕ ಅನಾವರಣ ಮಾಡಿದರು.
ಸಂಪನ್ಮೂಲ ವ್ಯಕ್ತಿ ಗಿರೀಶ್ ಅಂಪಾರು ಒಂದೇ ಮಾತರಂ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭ ಬಿ.ಬಿ. ಹೆಗ್ಡೆ ಕಾಲೇಜಿನ ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಜಿಲ್ಲಾ ಸಾಹಿತ್ಯ ಪರಿಷತ್ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಸರ್ಜನ್ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ರವಿಶಂಕರ್ ರಾವ್ ಮತ್ತು ಡಾ. ಎಚ್ ಎನ್ ವನಿತಾ ಲಕ್ಷ್ಮಿ, ರೇಡಿಯೋ ಕುಂದಾಪುರದ ಜ್ಯೋತಿ ಸಾಲಿಗ್ರಾಮ ಹಾಗೂ ಬಿ.ಬಿ ಹೆಗ್ಡೆ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರೇಷ್ಮಾ ಶೆಟ್ಟಿ, ಪ್ರವೀಣಾ ಎಂ ಪೂಜಾರಿ, ಕಾರ್ಯಕ್ರಮ ಸಂಯೋಜಕಿ ರಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭ ಸ್ವರಾಜ್ಯ 75ರ ಸಂಯೋಜಕ ಪ್ರದೀಪ್ ಬಸ್ರೂರ್ ಪ್ರಸ್ತಾವಿಸಿ, ಸ್ವಾಗತ ಕೋರಿದರು. ವಿದ್ಯಾರ್ಥಿನಿ ಅನುಶ್ರೀ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು

 

Related Articles

error: Content is protected !!