Home » ವಾಣಿಜ್ಯ ವಿಭಾಗದ ವತಿಯಿಂದ ಪ್ರಾಂಶುಪಾಲರಿಗೆ ಸನ್ಮಾನ
 

ವಾಣಿಜ್ಯ ವಿಭಾಗದ ವತಿಯಿಂದ ಪ್ರಾಂಶುಪಾಲರಿಗೆ ಸನ್ಮಾನ

by Kundapur Xpress
Spread the love

ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಡಾಕ್ಟರೇಟ್ ಪದವಿ ಪಡೆದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಅವರಿಗೆ ‘ವಿಧಿಕ್ತ-2025’ ಅಂತರ್-ತರಗತಿ ಮೂಟ್‌ಕೋರ್ಟ್ ಸ್ಪರ್ಧೆಯ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭ ವಿದ್ಯಾರ್ಥಿಗಳು ನೈತಿಕತೆ ಮತ್ತು ಶ್ರಮದ ಮೂಲಕ ಯಶಸ್ಸು ಸಾಧಿಸಬೇಕು ಎಂದು ಪ್ರೇರಣದಾಯಕ ಮಾತುಗಳನ್ನಾಡಿದರು. ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಶ್ರೀ ರಾಜೇಶ್ ಶೆಟ್ಟಿ ವಕ್ವಾಡಿ ಸನ್ಮಾನ ಪತ್ರವನ್ನು ವಾಚಿಸಿದರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಸಾರ್ವಜನಿಕ ಅಭಿಯೋಜಕರಾ ಶ್ರೀ ರಾಜು ಪೂಜಾರಿ ಬನ್ನಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ವಿ. ಭಟ್, ಕಾರ್ಯಕ್ರಮದ ಸಂಯೋಜಕರಾದ ಶ್ರೀ ಸತೀಶ್ ಶೆಟ್ಟಿ ಹೆಸ್ಕುತ್ತೂರು, ಶ್ರೀಮತಿ ಜೋಸ್ಲಿನ್ ರೆನಿಟಾ ಡಿ. ಅಲ್ಮೇಡಾ ಹಾಗೂ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

 

Related Articles

error: Content is protected !!