Home » ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಇಂಗ್ಲೀಷ್ ಡೇ
 

ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಇಂಗ್ಲೀಷ್ ಡೇ

by Kundapur Xpress
Spread the love

ಕುಂದಾಪುರ : ಜಾಗತಿಕ ಭಾಷೆಯಾದ ಇಂಗ್ಲೀಷ್‌ನ ಅರಿವು ಇಂದು ಅಗತ್ಯವಾಗಿದು, ಉದ್ಯೋಗಾವಕಾಶ ಮತ್ತು ವ್ಯವಹಾರದ ಸಂದರ್ಭದಲ್ಲಿ ಈ ಭಾಷೆಯ ಪ್ರಾಮುಖ್ಯತೆ ತಿಳಿಯುತ್ತದೆ. ಮಾತೃ ಭಾಷೆಯ ಜೊತೆಗೆ ಸಂವಹನಕ್ಕಾಗಿ ಮತ್ತು ಜ್ಞಾನದ ತಿಳುವಳಿಕೆಗಾಗಿ ಇಂಗ್ಲೀಷ್ ಭಾಷೆಗೆ ಪ್ರಾಮುಖ್ಯತೆ ನೀಡಿ ಎಂದು ಜನತಾ ಪದವಿ-ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಶ್ರೀಮತಿ ಪ್ರಿಯಾಂಕಾ ಜೋಸ್ ಹೇಳಿದರು.
ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ವಿಭಾಗ ಆಯೋಜಿಸಿದ ಇಂಗ್ಲೀಷ್ ಡೇ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ. ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಸುಬ್ರಹ್ಮಣ್ಯ ಅತಿಥಿಗಳನ್ನು ಪರಿಚಯಿಸಿ, ಸಮರ್ಥ್ ಸ್ವಾಗತಿಸಿ, ರಶ್ಮಿತಾ ಬಹುಮಾನಿತರ ಪಟ್ಟಿ ವಾಚಿಸಿದರು. ಆಕಾಶ್ ವಂದಿಸಿ, ಶರತ್ ನಿರೂಪಿಸಿದರು.

 

Related Articles

error: Content is protected !!