Home » ಜೀವನ ಮೌಲ್ಯ ಉಪನ್ಯಾಸ ಮಾಲಿಕೆ ಉದ್ಘಾಟನೆ
 

ಜೀವನ ಮೌಲ್ಯ ಉಪನ್ಯಾಸ ಮಾಲಿಕೆ ಉದ್ಘಾಟನೆ

by Kundapur Xpress
Spread the love

ಕುಂದಾಪುರ : ಸನಾತನ ಧರ್ಮವನ್ನು ಹೊಂದಿದ ಭಾರತೀಯರಿಗೆ ಸಂಸ್ಕೃತಿಯ ಬೇರು ಗಟ್ಟಿಯಾಗಿದೆ. ಈ ಸಾಂಸ್ಕೃತಿಕ ಪರಂಪರೆಯನ್ನು, ಮಾನವ ಧರ್ಮವನ್ನು ಅರ್ಥೈಸಿಕೊಳ್ಳುವ ಮೂಲಕ ಜೀವನದ ಅರ್ಥವನ್ನು ತಿಳಿಯಬಹುದು ಎಂದು ಉಡುಪಿಯ ಉಜ್ವಲ್ ಗ್ರೂಪ್ಸ್ ನ ಆಡಳಿತ ನಿರ್ದೇಶಕರಾದ ಶ್ರೀ ಅಜಯ್ ಪಿ. ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ರೇಷ್ಮಾ ಓ ಸ್ವಾಗತಿಸಿ, ಮೇಘನಾ ವಂದಿಸಿ, ಶಯನ ಅತಿಥಿಗಳನ್ನು ಪರಿಚಯಿಸಿದರು. ಅಭಿಷೇಕ್ ಪ್ರಾರ್ಥಿಸಿ, ಮಿಥಿಲೇಶ್ ನಿರೂಪಿಸಿದರು

 

Related Articles

error: Content is protected !!