154
ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2 ಇವುಗಳ ಆಶ್ರಯದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸ್ವಚ್ಛ ಸಂಗಮ್ ಸ್ವಚ್ಛತಾ ಕಾರ್ಯಕ್ರಮ ಹಾಗೂ ‘ಸರ್ದಾರ್ ವಲ್ಲಭಭಾಯಿ ಪಟೇಲ್: ಭಾರತದ ರಾಷ್ಟ್ರಶಿಲ್ಪಿ’ ಎನ್ನುವ ವಿಷಯದ ಮೇಲೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಯಿತು ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಮತ್ತು ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಮತ್ತು ಪೂಜಾ ಕುಂದರ್ ಉಪಸ್ಥಿತರಿದ್ದರು.

