ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಹಾಗೂ ಗಣಕ ವಿಜ್ಞಾನ ವಿಭಾಗದ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆದ “ಶ್ಲೋಕ/ ಭಗವದ್ಗೀತೆ ಪಠಣ” ಸ್ಪರ್ಧೆಯಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ಮಹಾಭಾರತದ ವಿವಿಧ ಅಧ್ಯಾಯಗಳಿಂದ ಆಯ್ದ ಶ್ಲೋಕಗಳನ್ನು ಸುಂದರವಾಗಿ ಪ್ರಸ್ತುತ ಪಡಿಸಿದರು.
ಕಾರ್ಯಕ್ರಮದಲ್ಲಿ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಆಡಳಿತ ನಿಕಾಯತರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್, ಇತರ ಪ್ರಾಧ್ಯಾಪಕರು ಹಾಗೂ ವೀಕ್ಷಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಸ್ಪರ್ಧೆಯಲ್ಲಿ ಸಿಂಚನಾ ಪ್ರಥಮ ಬಿಸಿಎ (ಬಿ) ಪ್ರಥಮ ಬಹುಮಾನ ಹಾಗೂ ನಾಗಶ್ರೀ ಭಟ್ ತೃತೀಯ ಬಿ.ಕಾಂ (ಬಿ) ದ್ವಿತೀಯ ಬಹುಮಾನವನ್ನು ಗಳಿಸಿದರು. ಗಣಕಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ಜಯಲಕ್ಷ್ಮೀ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

