Home » ಏಡ್ಸ್ ಅರಿವು: ಜನಜಾಗೃತಿ ಜಾಥಾ
 

ಏಡ್ಸ್ ಅರಿವು: ಜನಜಾಗೃತಿ ಜಾಥಾ

by Kundapur Xpress
Spread the love

ಕುಂದಾಪುರ : ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟಿ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾಲೇಜಿನಿಂದ ಸಂಗಮ್ ಜಂಕ್ಷನ್‌ವರೆಗೆ ಜಾಥಾ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಜಾಥಾಕ್ಕೆ ಚಾಲನೆ ನೀಡಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಆಡಳಿತ ನಿಕಾಯಕರಾದ ರಕ್ಷಿತ್ ರಾವ್, ಯುವ ರೆಡ್‌ಕ್ರಾಸ್ ಕಾರ್ಯಕ್ರಮದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್, ಮಾಲತಿ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು.

 

Related Articles

error: Content is protected !!