Home » ಸಿಎಸ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
 

ಸಿಎಸ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು

by Kundapur Xpress
Spread the love

ಕುಂದಾಪುರ : ಇನ್ಸ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿಎಸ್ ಫೌಂಡೇಶನ್ ನವೆಂಬರ್ 2025ರ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ.
ದೀಕ್ಷಿತ್, ತೃಪ್ತಿ ಶಿವರಾಮ ಪೂಜಾರಿ, ವೈಷ್ಣವಿ ವಿ. ಪೂಜಾರಿ, ಸಾಂಗ್ವಿ, ರಕ್ಷಿತಾ, ದರ್ಶನ್, ಸುಜಿತ್ ಕುಮಾರ್, ದರ್ಶನ್ ಕುಮಾರ್, ಧನುಷ್ ಜೆ. ಶೆಟ್ಟಿ, ಅರ್ಪಿತಾ, ಧನುಶ್ರೀ, ಪುಷ್ಪ ಕುಲಾಲ್, ಮನೋಹರ್, ಹಾಗೂ ರಚನಾ ಉತ್ತೀರ್ಣರಾಗಿದ್ದಾರೆ.
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ-ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

 

Related Articles

error: Content is protected !!