Home » ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ: ನಿವೃತ್ತ ಯೋಧರಿಗೆ ಸನ್ಮಾನ
 

ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ: ನಿವೃತ್ತ ಯೋಧರಿಗೆ ಸನ್ಮಾನ

by Kundapur Xpress
Spread the love

ಕುಂದಾಪುರ : ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಮಹತ್ವದ್ದು. ವಿದ್ಯಾರ್ಥಿ ದೆಸೆಯಲ್ಲಿಯೇ ದೇಶಾಭಿಮಾನದ ಮೌಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡಾಗ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿಯವರು ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 77ನೇ ಗಣರಾಜ್ಯೋತ್ಸವದ ಫಥ ಸಂಚಲನದ ಗೌರವವನ್ನು ಸ್ವೀಕರಿಸಿ, ಧ್ವಜಾರೋಹಣ ಮಾಡಿ ಮಾತನಾಡಿದರು. ಈ ಸಂದರ್ಭ ಭಾರತೀಯ ಸೇನೆಯ ನಿವೃತ್ತ ಸೈನಿಕ ಶ್ರೀ ದಿನೇಶ್ ಆಚಾರ್ಯ ಆಲೂರು ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಸಿ.ಸಿ. ಅಧಿಕಾರಿ ಶ್ರೀ ತಿಮ್ಮಪ್ಪ ಡಿ.ಎಸ್., ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಲೆಫ್ಟಿನೆಂಟ್ ಹರೀಶ್ ಬಿ., ಎ.ಎನ್.ಓ., ವಂದಿಸಿ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಶ್ರೀ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿ, ನಿರೂಪಿಸಿದರು.

 

Related Articles

error: Content is protected !!