Home » ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
 

ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

by Kundapur Xpress
Spread the love

ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕಗಳ 2025-26ನೇ ಶೈಕ್ಷಣಿಕ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಯಡಾಡಿ-ಮತ್ಯಾಡಿಯ ಶ್ರೀ ವಿನಾಯಕ ಸಭಾಭವನದಲ್ಲಿ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ಸುಬ್ಬಣ್ಣ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಿಬಿರದ ಮುಖ್ಯ ಪ್ರವರ್ತಕರು ಮತ್ತು ಪ್ರಥಮ ದರ್ಜೆ ಗುತ್ತಿಗೆದಾರರಾದ ಲಯನ್ ಬಿ. ಅರುಣ್ ಕುಮಾರ್ ಹೆಗ್ಡೆ ಶುಭ ಹಾರೈಸಿದರು.
ಸುಜ್ಞಾನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಶುಭಾಶಂಸನೆಗೈದರು. ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಕೆ.ಸಿ. ರಾಜೇಶ್ ಅವರು ಮಾತನಾಡಿ, ಕೃತಕ ಬುದ್ಧಿಮತ್ತೆ ಚಾಲ್ತಿಯಲ್ಲಿರುವ ಈ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳಲ್ಲಿ ಮನುಷ್ಯ ಸಂವೇದನೆಗಳನ್ನು ಬೆಳೆಸಲು ಇಂತಹ ಎನ್.ಎಸ್.ಎಸ್. ಶಿಬಿರಗಳು ಉಪಯುಕ್ತ. ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಬದುಕಿಗೆ, ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಈ ಶಿಬಿರ ದಾರಿದೀಪವಾಗಲಿ ಎಂದರು.
ಕಾರ್ಯಕ್ರಮದಲ್ಲಿ ಹೊಂಬಾಡಿ-ಮಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ಶೆಟ್ಟಿ, ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ಮಹಿಳಾ ಉದ್ಯಮಿ ಶ್ರೀಮತಿ ವಸಂತಿ ಎಮ್. ಶೆಟ್ಟಿ ಹುಣ್ಸೆಮಕ್ಕಿ, ಯಡಾಡಿಯ ಓಂಕಾರ್ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕರಾದ ಗಜೇಂದ್ರ ಶೆಟ್ಟಿ, ಹಾಲಾಡಿ ಫುಡ್ ಪ್ರಾಡಕ್ಟ್ ಇಂಡಸ್ಟ್ರೀಸ್ ಮಾಲಕರಾದ ಯುವ ಉದ್ಯಮಿ ಶ್ರೇಯಸ್ ಶೆಟ್ಟಿ, ಸಂಸ್ಥೆಯ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡಾಡಿ-ಮತ್ಯಾಡಿಯ ಮುಖ್ಯೋಪಾಧ್ಯಾಯರಾದ ಶ್ರೀ ನಾಗೇಶ್ ಕಿಣಿ, ಹುಣ್ಸೆಮಕ್ಕಿಯ ಪ್ರಗತಿ ಫೈನಾನ್ಸ್ನ ಮಾಲೀಕರಾದ ಶ್ರೀ ಟಿ. ರಮೇಶ್ ಶೆಟ್ಟಿ, ಸ್ಥಳೀಯರಾದ ಶ್ರೀ ಶಂಕರ್ ಮೊಗವೀರ, ಶ್ರೀ ದಿನೇಶ್ ಮೊಗವೀರ, ಮಂಜುನಾಥ್ ಮತ್ಯಾಡಿ ಹಾಗೂ ಎನ್.ಎಸ್.ಎಸ್. ಸ್ವಯಂಸೇವಕ ಪ್ರತಿನಿಧಿಗಳಾದ ವಿಕಾಸ್ ಶೆಟ್ಟಿ, ಅಭಿಷೇಕ್, ಶರಣ್ಯ ಶೆಟ್ಟಿ, ದೀಪಿಕಾ ಉಪಸ್ಥಿತರಿದ್ದರು.
ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳಾದ ಶ್ರೀ ರಾಜೇಶ್ ಶೆಟ್ಟಿ ವಕ್ವಾಡಿ ಸ್ವಾಗತಿಸಿ, ಪೂಜಾ ಕುಂದರ್ ವಂದಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

 

Related Articles

error: Content is protected !!