ಯಡಾಡಿ-ಮತ್ಯಾಡಿ : ವಿದ್ಯಾರ್ಥಿಗಳು ಸಾಂಸ್ಕೃತಿಕ ಅಭಿರುಚಿ ಹೊಂದಿದಲ್ಲಿ ಅದು ಅವರ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಎಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡಾಡಿ-ಮತ್ಯಾಡಿಯ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀ ಸತೀಶ್ ಅಡಿಗ ಮತ್ಯಾಡಿ ಅವರು ಹೇಳಿದರು.
ಅವರು ಇಲ್ಲಿನ ಶ್ರೀ ವಿನಾಯಕ ಸಭಾಭವನ ಯಡಾಡಿ-ಮತ್ಯಾಡಿಯಲ್ಲಿ ನಡೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕುಂದಾಪುರದ ವಿ.ಕೆ.ಆರ್. ಆಚಾರ್ಯ ಹೈಸ್ಕೂಲ್‌ನ ಅಧ್ಯಾಪಕರಾದ ಶ್ರೀ ಪ್ರೀತೇಶ್ ಶೆಟ್ಟಿ ಯಡಾಡಿ, ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ, ಬಿದ್ಕಲ್‌ಕಟ್ಟೆ ಇದರ ನಿವೃತ್ತ ಮ್ಯಾನೇಜರ್‌ರಾದ ಶ್ರೀ ರತ್ನಾಕರ ಶೆಟ್ಟಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಯಡಾಡಿ-ಮತ್ಯಾಡಿ ಇದರ ಎಸ್.ಡಿ.ಎಮ್.ಸಿ. ಸದಸ್ಯರುಗಳಾದ ಶ್ರೀಮತಿ ರೇವತಿ ಮತ್ತು ಶ್ರೀಮತಿ ಹೇಮಲತಾ, ಪ್ರಾಕ್ತನ ವಿದ್ಯಾರ್ಥಿ ಶ್ರೀ ವಿನಾಯಕ್ ಅಡಿಗ ಶಿರಿಯಾರ, ಶಿಬಿರಾಧಿಕಾರಿಗಳಾದ ಶ್ರೀ ರಾಜೇಶ್ ಶೆಟ್ಟಿ ವಕ್ವಾಡಿ ಮತ್ತು ಪೂಜಾ ಕುಂದರ್ ಉಪಸ್ಥಿತರಿದ್ದರು.
ಎನ್.ಎಸ್.ಎಸ್. ಸ್ವಯಂಸೇವಕಿ ಶರಣ್ಯ ಶೆಟ್ಟಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

