ಕುಂದಾಪುರ : ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ವಿನಾಯಕ ಸಭಾಭವನ ಯಡಾಡಿ-ಮತ್ಯಾಡಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ, ಉಡುಪಿ, ಶಿವಶಾಂತಿ ಲಯನ್ಸ್ ಕ್ಲಬ್, ಮೊಳಹಳ್ಳಿ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಡಾಡಿ-ಮತ್ಯಾಡಿ ಇವರ ಸಹಯೋಗದೊಂದಿಗೆ ನಡೆಯಿತು.
ಉಡುಪಿ ತಾಲೂಕು ಆರೋಗ್ಯ ಅಧಿಕಾರಿಯವರ ಕಛೇರಿಯಲ್ಲಿ ವೈದ್ಯಾಧಿಕಾರಿಯಾಗಿರುವ ಡಾ| ಕೃತಿ ಆರ್. ಹೆಗ್ಡೆ ಯಡಾಡಿ-ಮತ್ಯಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಬಿದ್ಕಲ್‌ಕಟ್ಟೆ ಇಲ್ಲಿನ ವೈದ್ಯಾಧಿಕಾರಿಯಾದ ಡಾ| ಪೂರ್ಣಿಮಾ ಶೇಟ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.
ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಇದರ ಅಧ್ಯಕ್ಷರಾದ ಶ್ರೀ ಸಚಿನ್ ನಕ್ಕತ್ತಾಯ ಶುಭ ಹಾರೈಸಿದರು. ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ, ಉಡುಪಿ ಇದರ ವೈದ್ಯಕೀಯ ಅಧೀಕ್ಷಕರಾದ ಡಾ| ನಾಗರಾಜ್ ಪೂಜಾರಿ ಆಶಯ ನುಡಿಗಳನ್ನಾಡಿದರು.
ಹೊಂಬಾಡಿ-ಮAಡಾಡಿಯ ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ್ ಹೆಗ್ಡೆ ಜಪ್ತಿ, ಶಿವ ಶಾಂತಿ, ಲಯನ್ಸ್ ಕ್ಲಬ್ ಮೊಳಹಳ್ಳಿ ಇದರ ಅಧ್ಯಕ್ಷರಾದ ಶ್ರೀ ದೀನ್‌ಪಾಲ ಶೆಟ್ಟಿ, ಎನ್.ಎಸ್.ಎಸ್. ಶಿಬಿರಾಧಿಕಾರಿ ಶ್ರೀ ರಾಜೇಶ್ ಶೆಟ್ಟಿ ವಕ್ವಾಡಿ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಶಿಬಿರಾಧಿಕಾರಿ ಪೂಜಾ ಕುಂದರ್ ಕಾರ್ಯಕ್ರಮವನ್ನು ನಿರ್ವಹಿಸಿ, ವಂದಿಸಿದರು.

