Home » ಬಿ.ಬಿ. ಹೆಗ್ಡೆ ಕಾಲೇಜು: ವಿಸ್ತರಣಾ ಚಟುವಟಿಕೆ
 

ಬಿ.ಬಿ. ಹೆಗ್ಡೆ ಕಾಲೇಜು: ವಿಸ್ತರಣಾ ಚಟುವಟಿಕೆ

by Kundapur Xpress
Spread the love

ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ವಿಭಾಗವು ವಿಸ್ತರಣಾ ಚಟುವಟಿಕೆಯ ಭಾಗವಾಗಿ ತಲ್ಲೂರಿನ ನಾರಾಯಣ ವಿಶೇಷ ಮಕ್ಕಳ ಶಾಲೆಗೆ ಭೇಟಿ ನೀಡಿ, ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಮತ್ತು ಮನೋರಂಜನೆ ಕಾರ್ಯಕ್ರಮಗಳನ್ನು ನೀಡಿದರು. ಈ ಸಂದರ್ಭ ಬರವಣಿಗೆಯ ಪರಿಕರಗಳನ್ನು ಮತ್ತು ದಿನಸಿ ವಸ್ತುಗಳನ್ನು ನೀಡಲಾಯಿತು.
ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ದೀಪಿಕಾ ಜಿ., ಪ್ರಾಧ್ಯಾಪಕರಾದ ರವೀನಾ ಸಿ. ಪೂಜಾರಿ, ಶ್ರೀಮತಿ ಸ್ವಾತಿ ಜಿ. ರಾವ್, ಶ್ರೀಮತಿ ಸುರೇಖಾ ಆಚಾರ್ ಹಾಗೂ ಶಾಲಾ ಟ್ರಸ್ಟಿ ಶ್ರೀಮತಿ ಮನೋರಮಾ ಮತ್ತು ಮುಖ್ಯ ಶಿಕ್ಷಕರಾದ ಶ್ರೀ ಚಂದ್ರಶೇಖರ್ ಶೆಟ್ಟಿ, ಶಿಕ್ಷಕರು ಉಪಸ್ಥಿತರಿದ್ದರು.

 

Related Articles

error: Content is protected !!