Home » ಸಿ.ಎ. ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
 

ಸಿ.ಎ. ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

by Kundapur Xpress
Spread the love

ಕುಂದಾಪುರ : ಇನ್‌ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆ0ಟ್ ಆಫ್ ಇಂಡಿಯಾ ನಡೆಸುವ ಸಿ.ಎ. ಫೌಂಡೇಶನ್ ಹಾಗೂ ಇಂಟರ್‌ಮೀಡಿಯಟ್ ಗ್ರೂಪ್ I ರ ಜನವರಿ 2026ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಬಾಲಕೃಷ್ಣ ಭಟ್, ಇಂಚರ, ವಿಕಾಸ್, ಶಶಾಂಕ ಆರ್. ಭಟ್, ಸಂಜನಾ, ಬಿಂದುಶ್ರೀ, ಆಕಾಶ್ ಎಮ್.ಎಮ್., ಸಿ.ಎ. ಫೌಂಡೇಶನ್‌ನಲ್ಲಿ ಹಾಗೂ ಪ್ರಜ್ವಲ್ ಎಸ್. ನಾಯಕ್ ಸಿ.ಎ. ಇಂಟರ್‌ಮೀಡಿಯಟ್ ಗ್ರೂಪ್ I ರಲ್ಲಿ ಉತ್ತೀರ್ಣವಾಗುವ ಮೂಲಕ ಉತ್ತಮ ಸಾಧನೆಗೈದಿದ್ದಾರೆ.
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ-ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

 

Related Articles

error: Content is protected !!