ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗವು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಡಾ. ಶಿವರಾಮ ಕಾರಂತ ಪ್ರತಿಷ್ಠಾನ – ಕಾರಂತ ಥೀಮ್ ಪಾರ್ಕ್, ಕೋಟ ಇವರ ಸಹಯೋಗದೊಂದಿಗೆ ಆಯೋಜಿಸಿದ ‘ಬರವಣಿಗೆ ಕೌಶಲ’ ಎನ್ನುವ ವಿಷಯದ ಕುರಿತಾದ ಒಂದು ದಿನದ ಕಾರ್ಯಾಗಾರದಲ್ಲಿ ಎರಡನೇ ಗೋಷ್ಠಿಯಲ್ಲಿ “ಬರೆಹದ ಮೋದ ” ವಿಷಯದ ಕುರಿತು ಸಾಹಿತಿ ಮತ್ತು ಕಲಾವಿದರಾದ ಶ್ರೀಮತಿ ಸುಮನಾ ಆರ್. ಹೇರ್ಳೆ ಸಾಲಿಗ್ರಾಮ ಉಪನ್ಯಾಸ ನೀಡಿದರು.
ಜಪಾನಿನ ಹೈಕುಗಳು ಜೊತೆಗೆ ಹನಿಗವನ, ಚುಟುಕುಗಳು ಸೇರಿದಂತೆ ಕಾವ್ಯದ ವಿವಿಧ ಪ್ರಕಾರಗಳು ಮತ್ತು ಅವುಗಳ ಗುಣಲಕ್ಷಣಗಳ ಬಗ್ಗೆ ಉದಾಹರಣೆ ನೀಡುವ ಮೂಲಕ ಮಾಹಿತಿ ನೀಡಿದರು. ಇದೇ ಸಂದರ್ಭ ಅವರು ಆರಂಭದಲ್ಲಿ ವಿದ್ಯಾರ್ಥಿಗಳು ಮಾಡುವ ಸಣ್ಣ ಪ್ರಯತ್ನಗಳೇ ಭವಿಷ್ಯದಲ್ಲಿ ದೊಡ್ಡ ಸಾಹಿತ್ಯ ಕೃತಿಗಳ ಹುಟ್ಟಿಗೆ ಕಾರಣವಾಗುತ್ತದೆ ಎಂದರು.
ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಸಮನ್ವಯದ ಮಾತುಗಳನ್ನಾಡಿದರು. ಈ ಸಂದರ್ಭ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ರೇಷ್ಮಾ ಶೆಟ್ಟಿ, ಶ್ರೀಮತಿ ಪ್ರವೀಣಾ ಎಮ್. ಪೂಜಾರಿ, ರಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಶ್ರೇಯಾ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ನಾಗಶ್ರೀ ವಂದಿಸಿ, ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.

