ಕುಂದಾಪುರ : ಸುತ್ತಮುತ್ತಲಿನ ಪರಿಸರವನ್ನು ಸೂಕ್ಷ್ಮವಾಗಿ ಗಮನಿಸುವ ಮೂಲಕ ಓದು ಬರಹವನ್ನು ಆರಂಭಿಸಿ ಮುಂದೆ ಅದೇ ನಿಮ್ಮ ಸಾಹಿತ್ಯದ ಬರವಣಿಗೆಯ ವಸ್ತುವಾಗಬಹುದು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯದರ್ಶಿ ಹಾಗೂ ನಿವೃತ್ತ ವಾಣಿಜ್ಯ ತೆರಿಗೆ ಇಲಾಖೆ ಪರಿವೀಕ್ಷಣಾಧಿಕಾರಿ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗವು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಡಾ. ಶಿವರಾಮ ಕಾರಂತ ಪ್ರತಿಷ್ಠಾನ – ಕಾರಂತ ಥೀಮ್ ಪಾರ್ಕ್, ಕೋಟ ಇವರ ಸಹಯೋಗದೊಂದಿಗೆ ಆಯೋಜಿಸಿದ ‘ಬರವಣಿಗೆ ಕೌಶಲ’ಎನ್ನುವ ವಿಷಯದ ಕುರಿತ ಒಂದು ದಿನದ ಕಾರ್ಯಾಗಾರದ ಮೂರನೇ ಗೋಷ್ಠಿಯಲ್ಲಿ ‘ಬರೆವಣಿಗೆ ಆರಂಭಿಸಿ’ ವಿಷಯದ ಕುರಿತು ಮಾತನಾಡಿದರು.
ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಶ್ರೀಮತಿ ಅಕ್ಷತಾ ಗಿರೀಶ್ ಸಮನ್ವಯಕಾರರಾಗಿ ಮಾತನಾಡಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ರೇಷ್ಮಾ ಶೆಟ್ಟಿ, ಶ್ರೀಮತಿ ಪ್ರವೀಣಾ ಎಮ್. ಪೂಜಾರಿ ಹಾಗೂ ರಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಪ್ರದೀಪ್ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ರಕ್ಷಿತ್ ವಂದಿಸಿ, ರಾಕೇಶ್ ನಿರೂಪಿಸಿದರು.

