ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋಟರ‍್ಯಾಕ್ಟ್ ಕ್ಲಬ್, ರೋಟರಿ ಕ್ಲಬ್, ಕುಂದಾಪುರ ಹಾಗೂ ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಇವರ ಜಂಟಿ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಇದರ ಅಧ್ಯಕ್ಷರು ಹಾಗೂ ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಕಂಪೆನಿಯ ಸೀನಿಯರ್ ಸೇಲ್ಸ್ ಮ್ಯಾನೇಜರ್ ರೋಟಾರಿಯನ್ ಗುರುರಾಜ ಕೊತ್ವಾಲ್ ತರಬೇತುದಾರರಾಗಿ ವಿದ್ಯಾರ್ಥಿಗಳಿಗೆ ತುರ್ತು ಸಂದರ್ಭದಲ್ಲಿ ಅಗತ್ಯವಿರುವ ಪ್ರಥಮ ಚಿಕಿತ್ಸೆಯ ಮಹತ್ವವನ್ನು ತಿಳಿಸಿದರು. ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಅರಿವು ವಿದ್ಯಾರ್ಥಿಗಳಿಗೆ ಅಗತ್ಯ ಎನ್ನುತ್ತಾ ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ರೋಟರಿ ಕ್ಲಬ್ ಕುಂದಾಪುರ ಅಧ್ಯಕ್ಷ ನಾಗರಾಜ್ ಶೆಟ್ಟಿ ಪ್ರಾಸ್ತಾವಿಸಿ, ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ವಿನಯಾ ವಿ. ಶೆಟ್ಟಿ ಸ್ವಾಗತಿಸಿ, ಶ್ರೀ ಗಿರಿರಾಜ್ ಭಟ್ ವಂದಿಸಿ, ದ್ವಿತೀಯ ಬಿ.ಕಾಂ. (ಬಿ) ವಿಭಾಗದ ಐಶ್ವರ್ಯ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ದ್ವಿತೀಯ ಬಿ.ಕಾಂ. ಸಿ ವಿಭಾಗದ ರಕ್ಷಿತಾ ನಿರೂಪಿಸಿದರು.

