Home » ಲಾಜಿಸ್ಟಿಕ್ ಹಾಗೂ ಸಪ್ಲೈ ಚೈನ್ ಮ್ಯಾನೇಜ್ಮೆಂಟ್ ಕುರಿತು ವಿಶೇಷ ಉಪನ್ಯಾಸ
 

ಲಾಜಿಸ್ಟಿಕ್ ಹಾಗೂ ಸಪ್ಲೈ ಚೈನ್ ಮ್ಯಾನೇಜ್ಮೆಂಟ್ ಕುರಿತು ವಿಶೇಷ ಉಪನ್ಯಾಸ

by Kundapur Xpress
Spread the love

ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪರಿಚಯಿಸಲಾದ ಲಾಜಿಸ್ಟಿಕ್ ಹಾಗೂ ಸಪ್ಲೈ ಚೈನ್ ಮ್ಯಾನೇಜ್ಮೆಂಟ್ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು  ಕಾಲೇಜಿನ ಮೂಕಾಂಬಿಕ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಮ್ಯಾಕ್ಸಿಸ್ ಡಿಸ್ಟಿçಬ್ಯೂಷನ್ ದುಬೈ ಕಂಪನಿಯ ಸಪ್ಲೈ ಚೈನ್ ಎಕ್ಸಿಕ್ಯೂಟಿವ್ ಆಗಿರುವ ಶ್ರೀ ಪೂರ್ಣಚಂದ್ರ ನಾಯಕ್‌ರವರು ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳಿಗೆ ಸಪ್ಲೈ ಚೈನ್ ಮ್ಯಾನೇಜ್ಮೆಂಟ್ ವಲಯದಲ್ಲಿನ ಉದ್ಯೋಗ ಅವಕಾಶಗಳ ಹೊಸ ಸಾಧ್ಯತೆಗಳು ಮತ್ತು ಸವಾಲುಗಳನ್ನು ತಿಳಿಸಿದರು.
ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಥಮ ಬಿಬಿಎ ವಿಭಾಗದ ವಿದ್ಯಾರ್ಥಿಯಾದ ರಾಹುಲ್ ಎಸ್. ಗೋಡೆ ಸ್ವಾಗತಿಸಿ, ಮನೋಜ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿ, ರೋನಿತ್ ಕುಮಾರ್ ಶೆಟ್ಟಿ ವಂದಿಸಿ, ಮಾನ್ಯ ಆಚಾರ್ಯ ಪ್ರಾರ್ಥಿಸಿದರು. ಪ್ರತೀಕ್ಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

 

Related Articles

error: Content is protected !!