26
ಕುಂದಾಪುರ : ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ನಡೆದ ಅಂತರ್-ಕಾಲೇಜು ಸಾಂಸ್ಕೃತಿಕ ಮತ್ತು ವ್ಯವಹಾರ ನಿರ್ವಹಣೆ ಸ್ಪರ್ಧೆಯಾದ ‘ಪೂರ್ಣಂ – 2026’ರಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ತಂಡ ಜಾನಪದ ಸಮೂಹ ಗಾಯನದಲ್ಲಿ ಪ್ರಥಮ, ಗುಂಪು ನೃತ್ಯದಲ್ಲಿ ಪ್ರಥಮ, ಫ್ಯಾಶನ್ ಶೋನಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಸತತ ಮೂರನೇ ಬಾರಿ ಸಮಗ್ರ ಪುರಸ್ಕಾರವನ್ನು ಪಡೆದಿದೆ. ತಂಡದ ಸದಸ್ಯರನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿಯವರು, ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರರು ಅಭಿನಂದಿಸಿದ್ದಾರೆ.

