37
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗವು ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿಯಲ್ಲಿ ವಿಸ್ತರಣಾ ಚಟುವಟಿಕೆ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪರಿಕರಗಳನ್ನು ನೀಡಿ ಶಿಸ್ತು, ಸ್ವಚ್ಛತೆ ಮತ್ತು ಉತ್ತಮ ನಡವಳಿಕೆಗಳ ಕುರಿತು ಮಾಹಿತಿ ನೀಡಲಾಯಿತು. ಇದೇ ಸಂದರ್ಭ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕಾದ ದಿನಚರಿ ಮತ್ತು ಆಹಾರ ಕ್ರಮದ ಕುರಿತು ತಿಳಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ, ಪ್ರಾಧ್ಯಾಪಕಿ ರೇವತಿ ಡಿ. ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

