ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಭಾಷಾ ಸಂಘದ ಆಶ್ರಯದಲ್ಲಿ ‘ಸ್ಪೀಕ್ ಟು ಕನೆಕ್ಟ್’ ಎನ್ನುವ ವಿಷಯದ ಕುರಿತು ಕಾರ್ಯಾಗಾರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರವೀನಾ ಸಿ. ಪೂಜಾರಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಸಂಪರ್ಕ ಬೆಳೆಸಲು ಮಾತು ಅತ್ಯಂತ ಮುಖ್ಯ. ಸಂವಹನ ಕೌಶಲ್ಯ ಶ್ರೇಷ್ಠ ಕೌಶಲ್ಯಗಳಲ್ಲಿ ಒಂದು. ಮಾತನಾಡುವುದು ಎಂದರೆ ಕೇವಲ ಪದ ಪ್ರಯೋಗವಲ್ಲ, ಅದು ಭಾವನೆ ಮತ್ತು ವಿಚಾರಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವುದರ ಮೂಲಕ ಆತ್ಮೀಯತೆ, ವಿಶ್ವಾಸ ಮತ್ತು ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ. ಒಳ್ಳೆಯ ಸಂವಹನದ ಮೂಲಕ ಮನುಷ್ಯನ ನಡುವಿನ ಅಂತರವನ್ನು ಕಡಿಮೆಗೊಳಿಸಿ, ಉತ್ತಮ ಸಂಬAಧವನ್ನು ಬೆಳೆಸಲು ಸಾಧ್ಯ ಎಂದರು. ಇದೇ ಸಂದರ್ಭ ಇಂಗ್ಲೀಷ್‌ನಲ್ಲಿ ಉತ್ತಮ ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಮೂಲಕ, ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆಯಲು, ಉತ್ತಮ ಉದ್ಯೋಗ ಗಳಿಸಲು ಸಾಧ್ಯ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ., ಭಾಷಾ ಸಂಘದ ಸಂಯೋಜಕಿ ಶ್ರೀಮತಿ ಪ್ರವೀಣಾ ಎಮ್. ಪೂಜಾರಿ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕರಾದ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮೇಘಾ ಎಸ್. ಭಟ್ ಅತಿಥಿಗಳನ್ನು ಪರಿಚಯಿಸಿದರು. ಭಾಷಾ ಸಂಘದ ಸಂಯೋಜಕರಾದ ಡಾ. ದೀಪಾ ವಂದಿಸಿ, ಶ್ರೀಮತಿ ಸ್ವಾತಿ ಜಿ. ರಾವ್ ಕಾರ್ಯಕ್ರಮ ನಿರೂಪಿಸಿದರು.

