194
ಕುಂದಾಪುರ : ಟಾಟಾ ಕನ್ಸ್ಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಸಂಸ್ಥೆಯು ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿಯನ್ನು ನಡೆಸಿತು. ಎಲ್ಲಾ ಅಂತಿಮ ವರ್ಷದ ಬಿ.ಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳು ಈ ಕ್ಯಾಂಪಸ್ ನೇಮಕಾತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಟಿಸಿಎಸ್ ಸಂಸ್ಥೆಯ HR ಅಧಿಕಾರಿ ಸಂಜಯ್‌ರವರು ವಿವಿಧ ಹುದ್ದೆಗಳು ಮತ್ತು ನೇಮಕಾತಿ ಪ್ರಕ್ರಿಯೆ ಬಗ್ಗೆ ಮಾಹಿತಿಯನ್ನು ನೀಡಿದರು. ಸಂಸ್ಥೆಯ ಇತರೆ ಅಧಿಕಾರಿಗಳಾದ ಸಂದೀಪ್, ಸ್ನೇಹ ಮತ್ತು ದಿವ್ಯರವರು ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ, ಕ್ಯಾಂಪಸ್ ನೇಮಕಾತಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶುಭಕೋರಿದರು.
ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ ಶ್ರೀ ತಿಮ್ಮಪ್ಪ ಡಿ.ಎಸ್. ಅವರು ಟಿಸಿಎಸ್ ಸಂಸ್ಥೆಯ ಅಧಿಕಾರಿಗಳನ್ನು ಸ್ವಾಗತಿಸಿ, ವ0ದಿಸಿದರು.

