ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ “ರೆಸ್ಯೂಮ್ ಬಿಲ್ಡಿಂಗ್ “ಕಾರ್ಯಾಗಾರ ನಡೆಯಿತು.
ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ಡೀನ್ ಅಕಾಡೆಮಿಕ್ಸ್ ಶ್ರೀ ಗಿರಿರಾಜ್ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಪರಿಣಾಮಕಾರಿ ರೆಸ್ಯೂಮ್ ರಚನೆ, ವೃತ್ತಿಪರ ಪ್ರೊಫೈಲ್ ಅಭಿವೃದ್ಧಿ ಹಾಗೂ ಉದ್ಯೋಗಾವಕಾಶಗಳಿಗೆ ಸಿದ್ಧರಾಗುವ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭ ಅವರು ವಿದ್ಯಾರ್ಥಿಗಳಿಗೆ ಉದ್ಯೋಗ ಗಿಟ್ಟಿಸುವಲ್ಲಿ ಪ್ರಾಥಮಿಕ ಹಂತದಲ್ಲಿ ರೆಸ್ಯೂಮ್ ಅತ್ಯಂತ ಮಹತ್ವದ್ದಾಗಿದ್ದು, ಉತ್ತಮ ವ್ಯಕ್ತಿತ್ವದ ದರ್ಪಣವಾಗಿ ರೆಸ್ಯೂಮ್ ಮೂಡಿ ಬರಲಿ ಎಂದರು.
ಈ ಸಂದರ್ಭ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಶ್ರೀ ಮಹೇಶ್ ಕುಮಾರ್, ಕಾರ್ಯಕ್ರಮ ಸಂಯೋಜಕರು ಮತ್ತು ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಮಹೇಶ್ ಪೂಜಾರಿ ಹಾಗೂ ಶಿವಾನಿ ಅಡಿಗ ಉಪಸ್ಥಿತರಿದ್ದರು.
ಬಿಸಿಎ ವಿದ್ಯಾರ್ಥಿಗಳಾದ ಅಮರ್ ಸ್ವಾಗತಿಸಿ, ವೈಷ್ಣವಿ ಅತಿಥಿಗಳನ್ನು ಪರಿಚಯಿಸಿ, ಶಶಿಕಾಂತ್ ವಂದಿಸಿ, ರಿಶಿತಾ ಪ್ರಾರ್ಥಿಸಿ, ಶಿಫಾ ಕಾರ್ಯಕ್ರಮ ನಿರೂಪಿಸಿದರು.

