33
ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ “ಯುಕ್ತಿ” ಕೋಡಿಂಗ್ ಕ್ಲಬ್”ಅನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಕೋಡಿಂಗ್‌ನ ಮಹತ್ವವನ್ನು ವಿವರಿಸಿ, ಇಂತಹ ಕ್ಲಬ್‌ಗಳು ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕೋಡಿಂಗ್ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು, ನವೀನ ಆಲೋಚನೆಗಳನ್ನು ಉತ್ತೇಜಿಸಲು ಸಹಕಾರಿ ಆಗುತ್ತವೆ ಎಂದರು. ಇದೇ ಸಂದರ್ಭ ವಿದ್ಯಾರ್ಥಿಗಳು ಈ ವೇದಿಕೆಯನ್ನು ತಮ್ಮ ತಾಂತ್ರಿಕ ಜ್ಞಾನವನ್ನು ವಿಸ್ತರಿಸಲು ಮತ್ತು ಭವಿಷ್ಯದ ಉದ್ಯೋಗಾವಕಾಶಗಳಿಗೆ ಸಿದ್ಧರಾಗಲು ಬಳಸಿಕೊಳ್ಳಬೇಕು ಎಂದು ಪ್ರೇರೇಪಿಸಿದರು.
ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಆಶಯ ನುಡಿಗಳನ್ನಾಡಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಅವರು ಕೋಡಿಂಗ್ ಕ್ಲಬ್‌ನ ಉದ್ದೇಶಗಳು ಮತ್ತು ಅದರ ಪ್ರಾಮುಖ್ಯತೆ ಕುರಿತು ವಿವರಿಸಿದರು. ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ಜಯಲಕ್ಷ್ಮಿ ಕೆ. ಹಾಗೂ ಶ್ರೀ ಪ್ರಣಮ್ ಆರ್. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮನಿಷಾ ಪ್ರಾರ್ಥಿಸಿ, ರಕ್ಷಾ ಸ್ವಾಗತಿಸಿ, ವಾಣಿಶ್ರೀ ವಂದಿಸಿದರು. ರಶ್ಮಿತಾ ಶೆಟ್ಟಿ ನಿರೂಪಿಸಿದರು.

