29
ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ಘಟಕದ ಆಶ್ರಯದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಪದವಿಯ ನಂತರ ಉನ್ನತ ಶಿಕ್ಷಣದ ಅವಕಾಶಗಳು ಹಾಗೂ ಉನ್ನತ ಶಿಕ್ಷಣದ ಮಹತ್ವದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅಲಿಯನ್ಸ್ ಅಸ್ಸೆಂಟ್ ಕಾಲೇಜು, ಬೆಂಗಳೂರು ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ಹರ್ಷಿತ್ ಕೆ. ಎಂ. ಮಾಹಿತಿ ನೀಡಿದರು. ಈ ಸಂದರ್ಭ ಅಲಿಯನ್ಸ್ ಯೂನಿವರ್ಸಿಟಿ ಮ್ಯಾನೇಜರ್ ಸುಕೇಶ್ ಜೆ. ಭಂಡಾರಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವೃತ್ತಿ ಮಾರ್ಗದರ್ಶಕ ಮತ್ತು ತರಬೇತಿ ಘಟಕದ ಸಂಯೋಜಕ ತಿಮ್ಮಪ್ಪ ಡಿ.ಎಸ್. ಸ್ವಾಗತಿಸಿ, ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ವಂದಿಸಿದರು.

