58
ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವತಿಯಿಂದ ವಿಸ್ತರಣಾ ಚಟುವಟಿಕೆಯ ಹಿನ್ನೆಲೆಯಲ್ಲಿ ಬ್ರಹ್ಮಾವರದ ಅಪ್ಪ-ಅಮ್ಮ ಅನಾಥಾಲಯಕ್ಕೆ ಮೇ 28ರಂದು ವಿದ್ಯಾರ್ಥಿಗಳು ಭೇಟಿ ನೀಡಿದರು.
ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು ದಿನಸಿ ಮತ್ತು ದೈನಂದಿನ ಅಗತ್ಯಗಳ ಕೆಲವು ವಸ್ತುಗಳನ್ನು ಅನಾಥಾಲಯಕ್ಕೆ ಕೊಡುಗೆಯಾಗಿ ನೀಡಿದರು. 2 ವಿದ್ಯಾರ್ಥಿಗಳು ಅವರ ಹುಟ್ಟುಹಬ್ಬದ ಪ್ರಯುಕ್ತ 25 ಲೀಟರ್ ಕುಕ್ಕರ್ ಮತ್ತು ಗ್ಯಾಸ್‌ಸ್ಟವ್ ನೀಡಿದರು. ಹಾಗೆಯೇ ದ್ವಿತೀಯ ಬಿ.ಬಿ.ಎ. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಮನೋರಂಜನೆ ಕಾರ್ಯಕ್ರಮವನ್ನು ಪ್ರದರ್ಶಿಸಿದರು.
ಈ ಸಂಧರ್ಭದಲ್ಲಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ಶ್ರೀ ರಜತ್ ಬಂಗೇರ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಅಕ್ಷಯ್ ಕುಮಾರ್ ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

