137
ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿದ್ಯಾರ್ಥಿ ಕ್ಷೇಮಾಪಾಲನಾ ಸಮಿತಿ ಹಾಗೂ ಗಣಕಶಾಸ್ತ್ರ ವಿಭಾಗದ ಜಂಟಿ ಆಶ್ರಯದಲ್ಲಿ “ಜನ್ಮಾಷ್ಟಮಿಯ ಶುಭಾಶಯ ಕಾರ್ಡ್ ತಯಾರಿ” ಸ್ಪರ್ಧೆಯನ್ನು ಆಯೋಜಿಸಲಾಯಿತು.
ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕತೆ ಹಾಗೂ ಕಲಾತ್ಮಕತೆಯನ್ನು ಉತ್ತೇಜಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಈ ಅಂತರ್-ತರಗತಿ ಸ್ಪರ್ಧೆಯಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

