Home » ಬ್ರಹತ್ ಶೈಕ್ಷಣಿಕ ಮಾಹಿತಿ ಮತ್ತು ವಸ್ತು ಪ್ರದರ್ಶನ
 

ಬ್ರಹತ್ ಶೈಕ್ಷಣಿಕ ಮಾಹಿತಿ ಮತ್ತು ವಸ್ತು ಪ್ರದರ್ಶನ

ಪೂರ್ವಭಾವಿ ಸಭೆ

by Kundapur Xpress
Spread the love

ಕುಂದಾಪುರ : ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಡಿಸೆಂಬರ್ 2ರಿಂದ 5ರ ತನಕ ನಡೆಯಲಿರುವ ಬ್ರಹತ್ ಶೈಕ್ಷಣಿಕ ಮಾಹಿತಿ ಮತ್ತು ವಸ್ತು ಪ್ರದರ್ಶನದ ಬಗ್ಗೆ ಪೂರ್ವಭಾವಿ ಸಭೆಯು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 19ರಂದು ಕಾಲೇಜಿನ ಆರ್.ಎನ್.ಶೆಟ್ಟಿ ಸಬಾಂಗಣದಲ್ಲಿ ನಡೆಯಿತು.
ಕುಂದಾಪುರ –ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನ ಶೈಕ್ಷಣಿಕ ಮಾಹಿತಿ , ವಸ್ತು ಪ್ರದರ್ಶನ ವೃತ್ತಿ ಮಾರ್ಗದರ್ಶನ ನೀಡಲು ನಿರ್ಧರಿಸಲಾಗಿದ್ದು, ಸರ್ವ ಸರಕಾರಿ ಇಲಾಖೆಗಳ ಸಹಭಾಗಿತ್ವದಲ್ಲಿ ಈ ಬ್ರಹತ್ ಶೈಕ್ಷಣಿಕ ಮತ್ತು ವಸ್ತು ಪ್ರದರ್ಶನ ನಡೆಯಲಿದೆ.
ವಿದ್ಯಾರ್ಥಿಗಳಿಗೆ ಬಹಳಷ್ಟು ವಿಷಯಗಳ ಬಗ್ಗೆ ಮಾಹಿತಿಗಳ ಕೊರತೆ ಇದ್ದು, ಅವರ ಭವಿಷ್ಯದ ದೃಷ್ಟಿಯಿಂದ ಈ ಕಾರ‍್ಯಕ್ರಮ ಆಯೋಜಿಸಲಾಗಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಈ ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಸಂಗೋಪನೆ ಇಲಾಖೆ, ಅರಣ್ಯ ಇಲಾಖೆ, ಕಾರ್ಮಿಕ ಇಲಾಖೆ, ವಿದ್ಯುತ್ ಇಲಾಖೆ, ಕ್ರೀಡಾ ಇಲಾಖೆ,ಮೀನುಗಾರಿಕೆ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ, ಕೈಗಾರಿಕಾ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಸಹಕಾರ ಇಲಾಖೆ, ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಸಲಹೆ ಸೂಚನೆ ನೀಡಿದರು. ಅಗತ್ಯವುಳ್ಳ ಇಲಾಖೆಗಳ ವಸ್ತು ಪ್ರದರ್ಶನ ಏರ್ಪಡಿಸುವ ನಿರ್ಧಾರ ಕೈಗೊಳ್ಳಲಾಯಿತು.
ಅಲ್ಲದೇ ವಿವಿಧ ಇಲಾಖೆಗಳಿಂದ ಪ್ರಾತ್ಯಕ್ಷಿಕೆ ತರಬೇತಿ, ಮಾಹಿತಿ ಮತ್ತು ಅವಕಾಶಗಳ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ವಿದ್ಯಾರ್ಥಿಗಳಿಗಾಗಿ ಮತ್ತು ಸಾರ್ವಜನಿಕರಿಗೆ ಮಾಹಿತಿ ನೀಡಲಿದ್ದಾರೆ. ಭಂಡಾರ್ಕಾರ್ಸ್ ಕಾಲೇಜಿನ ವಿವಿಧ ವಿಭಾಗಗಳಿಂದ ವಸ್ತುಪ್ರದರ್ಶನ ನಡೆಸಲು ನಿರ್ಧರಿಸಲಾಗಿದೆ ಎಂದು ಯು.ಎಸ್ ಶೆಣೈ ಮಾಹಿತಿ ನೀಡಿದರು.
ಸಾರ್ವಜನಿಕ ವಲಯದಲ್ಲಿರುವ ಬ್ಯಾಂಕ್ ಗಳು, ವಾಣಿಜ್ಯ, ಕೈಗಾರಿಕೆ, ಕುಶಲ ಕಲೆ ಮುಂತಾದ ವಿಷಯಗಳ ಕುರಿತು ಮಳಿಗೆಗಳನ್ನು ತೆರೆಯಲು ಅವಕಾಶವಿದೆ ಎಂದು ತಿಳಿಸಲಾಯಿತು.

   

Related Articles

error: Content is protected !!