Home » ಸಿ ಎಸ್ ಎಕ್ಸಿಕ್ಯೂಟಿವ್ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ
 

ಸಿ ಎಸ್ ಎಕ್ಸಿಕ್ಯೂಟಿವ್ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ

by Kundapur Xpress
Spread the love

ಮಂಗಳೂರು: ಸಿ.ಎ, ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗಾಗಿ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿ ಎಸ್ ಎಕ್ಸಿಕ್ಯೂಟಿವ್ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮವನ್ನು ಮಂಗಳೂರಿನ ತ್ರಿಶಾ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಪ್ರೊ. ರಾಜ್ ಗಣೇಶ್ ಕಾಮತ್ ಇವರು ಸಿ ಎಸ್ ಎಕ್ಸಿಕ್ಯೂಟಿವ್ ಕೋರ್ಸಿನ ಬಗ್ಗೆ ಹಾಗೂ ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ತ್ರಿಶಾ ಕ್ಲಾಸಸ್ ಮಂಗಳೂರು ಕೇಂದ್ರದ ಮುಖ್ಯಸ್ಥೆಯಾದ ಪ್ರೊ. ಯಶಸ್ವಿನಿ ಯಶ್‌ ಪಾಲ್‌ ತರಗತಿ ನಿಯಮಗಳನ್ನು ವಿವರಿಸಿದರು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಆರಂಭಿಸಲಾಯಿತು.ಕಾರ್ಯಕ್ರಮದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಪರ್ಣಾ ಹಾಗೂ ಅನುಶ್ರೀ ಪ್ರಾರ್ಥಿಸಿ, ಆದಿತ್ಯಾ ಜೆ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು. ಪುಷ್ಪಾ ವಂದಿಸಿದರು.

 

Related Articles

error: Content is protected !!