Home » ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
 

ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

by Kundapur Xpress
Spread the love

ಕುಂದಾಪುರ: ಕಳೆದ ಹದಿನಾಲ್ಕು ವರ್ಷಗಳಿಂದ ಸಿಎ ಹಾಗೂ ಸಿಎಸ್ ಪ್ರವೇಶ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಿರುವ ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು, Institute of Chartered Accountants of India (ICAI) ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಪರೀಕ್ಷೆಯಲ್ಲಿ ಸಾನ್ವಿ ಶೆಟ್ಟಿ – 305 ಅಂಕ, ತನ್ವಿ ಶೆಟ್ಟಿ – 268 ಅಂಕ, ನಮನ್ ನವೀನ್ ನಾಯಕ್ – 263 ಅಂಕ, ಪ್ರೀತಲ್ ಬಿ. ದೇವಾಡಿಗ – 203 ಅಂಕ ಹಾಗೂ ನೇಹಾ ಶೆಟ್ಟಿ – 202 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದು, ಮುಂದಿನ ಹಂತಕ್ಕೆ ಅರ್ಹತೆ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಯನ್ನು ಎಂ.ಎಂ. ಹೆಗ್ಡೆ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಮಹೇಶ್ ಹೆಗ್ಡೆ, ಕಾಲೇಜಿನ ಪ್ರಾಂಶುಪಾಲ ನಾಗರಾಜ್ ಶೆಟ್ಟಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.

 

Related Articles

error: Content is protected !!