Home » 1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ
 

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ

by Kundapur Xpress
Spread the love

ಬೆಂಗಳೂರು : ಒಂದನೇ ತರಗತಿ ದಾಖಲಾತಿಗೆ ಕಡ್ಡಾಯ ವಾಗಿ 6 ವರ್ಷ ಪೂರ್ಣಗೊಂಡಿರಬೇಕೆಂಬ ಶಾಲಾ ನಿಯಮವನ್ನು  2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅನ್ವಯವಾಗುವಂತೆ ಸಡಿಲಿಸಿದೆ. ಅದರಂತೆ ಬರುವ ಜೂ.1ಕ್ಕೆ 5 ವರ್ಷ 5 ತಿಂಗಳು ಪೂರ್ಣಗೊಳ್ಳುವ ಮಕ್ಕಳನ್ನು 1ನೇ ತರಗತಿಗೆ ದಾಖಲಿಸಿ ಕೊಳ್ಳಬಹುದು ಎಂದು ಆದೇಶಿಸಿದೆ.

ಆದರೆ, ಈ ಅವಕಾಶ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಜಿ-ಯುಕೆಜಿ) ಪೂರ್ಣಗೊಳಿಸಿರುವ ಮಕ್ಕಳಿಗೆ ಮಾತ್ರ ಅನ್ವಯಿಸಲಿದೆ ಎಂದು ತಿಳಿಸಲಾಗಿದೆ.

ಕನಿಷ್ಠ ವಯೋಮಿತಿ ಸಡಿಲಿಕೆ ವಿಚಾರವಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬುಧವಾರ ಸರ್ವಶಿಕ್ಷಣ ಅಭಿ ಯಾನ ಕಚೇರಿಯಲ್ಲಿ ತಮ್ಮ ಇಲಾಖಾ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿ ಬಳಿಕ ವಯೋಮಿತಿ ಸಡಿಲಿಸುವುದಾಗಿ ಪ್ರಕಟಿಸಿ ದರು. 2026-27ನೇ ಶೈಕ್ಷ ಣಿಕ ಸಾಲಿನಿಂದ ಈ ರೀತಿ ವಿನಾಯ್ತಿ ಇರುವುದಿಲ್ಲ. ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರ ಬೇಕೆಂಬ ನಿಯಮ ಜಾರಿಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

 

Related Articles

error: Content is protected !!