ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಕರಾಟೆ ಪಂದ್ಯಾವಳಿ :ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸಣ್ಣಾರಿ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

by Kundapur Xpress
Spread the love

ಉಡುಪಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಕರಾಟೆ ಪಂದ್ಯಾವಳಿಯಲ್ಲಿ, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸಣ್ಣಾರಿ, ಕುಂದಾಪುರದ ವಿದ್ಯಾರ್ಥಿಯಾದ ಮೊಹಮ್ಮದ್ (-82 ಕೆ.ಜಿ.) ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
ವಿದ್ಯಾರ್ಥಿಯ ಈ ಅಮೋಘ ಸಾಧನೆಗೆ ಹಾಗೂ ಈ ರೀತಿ ಸಾಧನೆ ಮಾಡಲು ಕಾರಣರಾದ ದೈಹಿಕ ಶಿಕ್ಷಣ ಶಿಕ್ಷಕರಾದ ವಿಶಾಲ್ ಖಾರ್ವಿ ಇವರಿಗೂ ಕೂಡ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಬೋಧಕ-ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

 

Related Articles

error: Content is protected !!