ಕುಂದಾಪುರ : ಗ್ರಾಮೀಣ ಭಾಗವಾದ ಸುಣ್ಣಾರಿಯಲ್ಲಿ 2012ರಲ್ಲಿ ಆರಂಭಗೊಂಡಿರುವ ಕುಂದಾಪುರ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಈಗ ಉತ್ತಮ ಫಲಿತಾಂಶ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ, ಕ್ರೀಡಾ ರಂಗ, ಸಾಂಸ್ಕೃತಿಕ ರಂಗದಲ್ಲೂ ಅದ್ವಿತೀಯ ಸಾಧನೆ ಮಾಡುತ್ತಾ, ಯಶಸ್ಸಿನ ಹಾದಿಯಲ್ಲಿ ಮುನ್ನಡೆಯುತ್ತಿದೆ. ವಿದ್ಯಾರ್ಥಿಗಳ ಹತ್ತಾರು ಸಾಧನೆಗಳ ಮೂಲಕ ಉಡುಪಿ ಜಿಲ್ಲೆಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ಎಂ.ಎಂ. ಹೆಗ್ಡೆ ಎಜುಕೇಶನಲ್ ಆ್ಯಂಡ್ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ ಮೊಳಹಳ್ಳಿ ತಿಳಿಸಿದರು
ಅವರು ಶನಿವಾರ ಕುಂದಾಪುರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿ, ಬೆರಳೆಣಿಕೆಯ ವಿದ್ಯಾರ್ಥಿಗಳೊಂದಿಗೆ ಸ್ಥಾಪನೆಗೊಂಡ ಈ ಸಂಸ್ಥೆಯಲ್ಲಿ ಪ್ರಸ್ತುತ 6 ರಿಂದ ಪ.ಪೂ. ಕಾಲೇಜಿನವರೆಗೆ 900ಕ್ಕೂ ಮಿಕ್ಕಿ ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಿವೆ. ನೀಟ್, జీఇఇ, ಸಿఇಟಿ ಎನ್‌ಡಿಎ ಸಿಎ ಸಿಎಸ್ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಕ್ಕಳು ರಾಂಕ್ ಪಡೆಯಲು ಸಜ್ಜುಗೊಳಿಸಲಾಗುತ್ತಿದ್ದು, ನುರಿತ ಉಪನ್ಯಾಸಕರು ತರಬೇತಿ ನೀಡುತ್ತಿದ್ದಾರೆ ಎಂದರು.
ಸಂಸ್ಥೆಯ ಹಲವು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಂಕ್ ಪಡೆದಿದ್ದು, ಜೆಇಇ ಅಡ್ವಾನ್ಸ್, ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ. ನೀಟ್, ಜೆಇಇ ಮೈನ್ಸ್, ಸಿಇಟಿ ಹಾಗೂ ಸಿಎಸ್‌ನಲ್ಲಿಯೂ ಪ್ರಥಮ ಸ್ಥಾನಿಯಾಗಿದೆ. ಪ್ರತೀ ವಾರ ಎಲ್ಲ ಪಿಯುಸಿ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದೆ. ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಕಾಲೇಜಿನ ವಿದ್ಯಾರ್ಥಿಗಳಾದ ಚಿರಾಗ್ ವಿನಾಯಕ ಮಹಾಲೆ ಪ್ರತಿಷ್ಠಿತ ಗುಜರಾತ್ ಗಾಂಧಿನಗರ ಐಐಟಿ ಹಾಗೂ ನಿಶಾ ಹೈದರಾಬಾದ್ ಐಐಟಿಯಲ್ಲಿ ಉಚಿತ ವ್ಯಾಸಂಗ ಮಾಡುತ್ತಿದ್ದಾರೆ. ಇದಕ್ಕೆ ಇಲ್ಲಿನ ಉಪನ್ಯಾಸಕರ ತಂಡದ ಮಾರ್ಗದರ್ಶನವೇ ಕಾರಣವಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಅದೇ ತಂಡ ಮುಂದುವರಿಯಲಿದೆ ಎಂದವರು ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಎಸೆಸೆಲ್ಸಿಯಲ್ಲಿ ಸರಕಾರಿ ಶಾಲೆಗಳಲ್ಲಿ 600ಕ್ಕಿಂತ ಹೆಚ್ಚಿನ ಅಂಕ ಪಡೆದ ಮೊದಲ 50 ಮಂದಿಗೆ ಉಚಿತ ಶಿಕ್ಷಣ ನೀಡುತ್ತಿದ್ದು, ಇದಲ್ಲದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬರುವವರಿಗೆ ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆಯು ಇದೆ. ಹಾಸ್ಟೆಲ್ ಮಕ್ಕಳಿಗೆ ವಿಶೇಷ ತರಗತಿಗಳು, ಯೋಗ, ಜೀವನ ಸಂಸ್ಕಾರವನ್ನು ಕಲಿಸಲಾಗುತ್ತಿದೆ. ಕ್ರೀಡೆ, ಈ ಸಾಂಸ್ಕೃತಿಕ ಚಟುವಟಿಕೆಗಳಿಗೂ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಆಟೋಟ ಸ್ಪರ್ಧೆಗಳಲ್ಲಿ ತಾಲೂಕು, ಜಿಲ್ಲೆ ರಾಜ್ಯ ಮಟ್ಟದಲ್ಲಿಯೂ ಮಿಂಚಿದ್ದಾರೆ. ಪ್ರತಿಭಾ ಕಾರಂಜಿಯಲ್ಲಿಮನೀಶ್ ಶೆಟ್ಟಿ ರಾಜ್ಯ ಮಟ್ಟಕ್ಕೂ ಆಯ್ಕೆಯಾಗಿದ್ದಾರೆ. ಸೆಪ್ಟೆಂಬರ್‌ನಲ್ಲಿ ನಮ್ಮ ಸಂಸ್ಥೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ನಾಗರಾಜ ಶೆಟ್ಟಿ ತಿಳಿಸಿದರು.