56
ಕುಂದಾಪುರ: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು, ಹೆಬ್ರಿ ಇವರ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಪ್ರೌಢಶಾಲಾ ವಿಭಾಗದ (8-12ನೇ ತರಗತಿ) ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಕುಂದಾಪುರ, ಇಲ್ಲಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾಯಿಶ್ರೀ ಪ್ರಥಮ ಸ್ಥಾನಗಳಿಸುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

