Home ಶಿಕ್ಷಣಕುಂದಾಪುರದ ಎಕ್ಸಲೆಂಟ್ ಕಾಲೇಜಿನಲ್ಲಿ ಅಂಬೇಡ್ಕರ್ ಅವರ ೧೩೫ ನೇ ಜಯಂತಿ ಆಚರಣೆ

ಕುಂದಾಪುರದ ಎಕ್ಸಲೆಂಟ್ ಕಾಲೇಜಿನಲ್ಲಿ ಅಂಬೇಡ್ಕರ್ ಅವರ ೧೩೫ ನೇ ಜಯಂತಿ ಆಚರಣೆ

by Kundapur Xpress

ಕುಂದಾಪುರ: ಇಲ್ಲಿನ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಭಾರತ ಸಂವಿಧಾನದ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಸಡಗರ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ದೇಶ ಕಂಡ ಅಪ್ರತಿಮ ಮಹಾನಾಯಕ. ಇಂದು ನಾವೆಲ್ಲರೂ ಶಾಂತಿ ಮತ್ತು ನೆಮ್ಮದಿಯ ಬದುಕು ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ಅವರು ರಚಿಸಿದ ಬಲಿಷ್ಠ ಸಂವಿಧಾನವೇ ಪ್ರಮುಖ ಕಾರಣ. ಅಂಬೇಡ್ಕರ್ ಅವರ ಬದುಕು ಮತ್ತು ಹೋರಾಟ ಪ್ರತಿಯೊಬ್ಬ ವ್ಯಕ್ತಿಗೂ ಮಾರ್ಗದರ್ಶಿಯಾಗಿದೆ ಎಂದು ನುಡಿದರು.ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

ಈ ಸಮಾರಂಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ಸರೋಜಿನಿ ಪಿ. ಆಚಾರ್ಯ, ಸಿಬಿಎಸ್‌ಇ ವಿಭಾಗದ ಸಂಯೋಜಕಿ ವಿಶಾಲ ಶೆಟ್ಟಿ ಸೇರಿದಂತೆ ಕಾಲೇಜಿನ ಎಲ್ಲಾ ಉಪನ್ಯಾಸಕರು, ಶಿಕ್ಷಕರು ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Related Articles