ಕುಂದಾಪುರ: ಕ್ರೀಡೆಯಲ್ಲಿ ಮಹೋನ್ನತ ಸಾಧನೆಯನ್ನು ಮಾಡುವ ಕನಸನ್ನು ಹೊಂದಿರುವ ವಿದ್ಯಾರ್ಥಿಗಳ ಮನೋಭಿಲಾಷೆಯನ್ನು ಈಡೇರಿಸಿ ರಾಜ್ಯ ರಾಷ್ಟ್ರಮಟ್ಟದಲ್ಲಿ ಅಂತಹ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ, ಇಲ್ಲಿ ಬೇಸಿಗೆ ಕ್ರೀಡಾ ಶಿಬಿರವನ್ನುನವೀನ್ ಕಾಂಚನ್ ರಾಷ್ಟ್ರೀಯ ವಾಲಿಬಾಲ್ ಆಟಗಾರನ ನೇತೃತ್ವದಲ್ಲಿ ಅದ್ದೂರಿಯಾಗಿ ಉದ್ಘಾಟನೆ ಮಾಡಲಾಯಿತು. ಸತತ 15 ದಿನಗಳ ಕಾಲ ನಡೆದ ಈ ಕ್ರೀಡಾ ಶಿಬಿರಕ್ಕೆ ಉಡುಪಿ ಜಿಲ್ಲೆಯ ನೂರಕ್ಕಿಂತಲೂ ಹೆಚ್ಚು ಮಕ್ಕಳು ಭಾಗವಹಿಸಿದ್ದಾರೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ರಾಜ್ಯದ ಹಾಗೂ ಜಿಲ್ಲೆಯ ಖ್ಯಾತ ತರಬೇತುದಾರರ ಮಾರ್ಗದರ್ಶನದ ಮೂಲಕ 20 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
ಈ 20 ವಿದ್ಯಾರ್ಥಿಗಳಿಗೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯು ಉಚಿತ ಶಿಕ್ಷಣವನ್ನು ನೀಡುವುದರ ಮೂಲಕ ಸಮಾಜದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ದೊರಕುವಂತಾಯಿತು. ಈ 15 ದಿನಗಳ ಕಾಲ ನಡೆದ ಶಿಬಿರದ ಸಮಾಪ್ತಿಯ ದಿನವಾದ 17.4.2026 ರಂದು ಎಲ್ಲಾ ಹೊರಗಿನ ವಿದ್ಯಾರ್ಥಿಗಳಿಗೂ ಸಹ ಉಚಿತವಾದ ವಾಲಿಬಾಲ್ ಟೂರ್ನಮೆಂಟ್ ಅನ್ನು ಆಯೋಜಿಸಲಾಯಿತು. ‘ಎಕ್ಸಲೆಂಟ್ ಟ್ರೋಪಿ 2026’ ಉಚಿತ ವಾಲಿಬಾಲ್ ಟೂರ್ನಮೆಂಟ್ ಗೆ ಜಿಲ್ಲೆಯ 16 ತಂಡಗಳು ಭಾಗವಹಿಸಿರುತ್ತದೆ. ಈ ಒಂದು ಬೇಸಿಗೆ ಕ್ರೀಡಾ ಶಿಬಿರದ ಸಮಾರೋಪ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಚಂದನ್ ಆಚಾರ್ಯ MEG INDIAN ARMY ಹಾಗೂ ರಾಷ್ಟ್ರೀಯ ವಾಲಿಬಾಲ್ ಪಟು ಇವರು ಪ್ರಶಸ್ತಿ ವಿತರಣೆ ಮಾಡಿ ಕ್ರೀಡೆಯ ಮಹತ್ವದ ಬಗ್ಗೆ ಮಕ್ಕಳಿಗೆ ಮನವರಿಕೆ ಮಾಡಿದರು.
ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಉಪನ್ಯಾಸಕರಾದ ಜೀವನ ಕುಮಾರ್ ಶೆಟ್ಟಿ ಅವರು ಸಾಧನೆ ಮಾಡಿದ ವಿದ್ಯಾರ್ಥಿಗಳ ಕಾರ್ಯ ಚಟುವಟಿಕೆಯ ಬಗ್ಗೆ ಕೊಂಡಾಡಿದರು. ಎಂ ಎಂ ಹೆಗ್ಡೆ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆಯವರು ಉತ್ತಮ ಆಟವಾಡಿ ಉಚಿತ ಶಿಕ್ಷಣ ಪಡೆದ ವಿದ್ಯಾರ್ಥಿಗಳ ಬಗ್ಗೆ ಹಾಗೂ ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳ ಕ್ರೀಡಾ ಸ್ಪೂರ್ತಿಯನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸುಸಂದರ್ಭದಲ್ಲಿ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ, ಮುಖ್ಯೋಪಾಧ್ಯಾಯನಿ ಸರೋಜಿನಿ ಪಿ ಆಚಾರ್ಯ, ಸಿಬಿಎಸ್ ಸಿ ವಿಭಾಗದ ಸಂಯೋಜಕರಾದ ವಿಶಾಲ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕರಾದ ವಿಶಾಲ್ ಖಾರ್ವಿ, ವಿಖ್ಯಾತ್ ಕಂಡ್ಲೂರು, ಸುದರ್ಶನ್ ಆಚಾರ್ಯ ಹುಸ್ಸೆಮಕ್ಕಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ರಸಿಕ್ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

